ಮನೆ ರಾಜಕೀಯ ಬೆಳಗಾವಿ ನಮ್ಮದು, ಒಂದಿಂಚನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

ಬೆಳಗಾವಿ ನಮ್ಮದು, ಒಂದಿಂಚನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

0

ಮೈಸೂರು(Mysuru): ಮಹಾಜನ ವರದಿಯೇ ಅಂತಿಮ. ಬೆಳಗಾವಿ ನಮ್ಮದು. ಅಲ್ಲಿನ ಒಂದಿಂಚನ್ನೂ ಯಾರಿಗೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ವರುಣಾ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ  ಅವರು  ಪತ್ರಕರ್ತರೊಂದಿಗೆ ಮಾತನಾಡಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಬುದ್ಧಿ ಹೇಳಿಸುವ ಧೈರ್ಯವೂ ಕರ್ನಾಟಕ ಬಿಜೆಪಿಗೆ ಇಲ್ಲ ಎಂದು ಟೀಕಿಸಿದರು.

ಕರ್ನಾಟಕ ಬಿಜೆಪಿಯವರು ಹೇಡಿಗಳು. ಎರಡೂ ಕಡೆ ಬಿಜೆಪಿ ಸರ್ಕಾರ ಇದ್ದರೂ ಗಡಿಯಲ್ಲಿ ಯಾಕೆ ಗಲಾಟೆ ನಡೆಯುತ್ತಿದೆ? ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತೆ ಮಾಡುತ್ತಿದ್ದಾರೇಕೆ ಎಂದು ಪ್ರಶ್ನಿಸಿದರು.

ಗಡಿ ವಿವಾದದ ಬಗ್ಗೆ ಒಳ್ಳೆಯ ವಕೀಲರನ್ನಿಟ್ಟು ವಾದ ಮಾಡಿಸಬೇಕು. ಮುಖ್ಯಮಂತ್ರಿಯು, ಪ್ರಧಾನಿ ಬಳಿಗೆ ಹೋಗಿ ನೈಜ ಸ್ಥಿತಿ ವಿವರಿಸಿ ಗಡಿಯಲ್ಲಿನ ಪರಿಸ್ಥಿತಿ ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.

ಗುಜರಾತ್ ಫಲಿತಾಂಶ ಕರ್ನಾಟಕದಲ್ಲಿ ಪ್ರಭಾವ ಬೀರುವುದಿಲ್ಲ:

ಗುಜರಾತ್​’ನಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು. ಆದರೆ ಈ ಫಲಿತಾಂಶ ಕರ್ನಾಟಕದ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಹೇಳಿದರು.

ಇಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಗುಜರಾತ್ ನಲ್ಲಿ ಬಿಜೆಪಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದಕೊಂಡಿದ್ದು ಅಧಿಕಾರ ಹಿಡಿಯುವ ಹಾದಿಯಲ್ಲಿದೆ. ಕಾಂಗ್ರೆಸ್​ಗೆ ಗುಜರಾತ್​ನಲ್ಲಿ ಅಮ್ ಆದ್ಮಿ ಪಾರ್ಟಿ ಪೈಪೋಟಿ ನೀಡಿದ್ದು, ಇದು ಕಾಂಗ್ರೆಸ್​ನ ಮತಗಳನ್ನು ವಿಭಾಗ ಮಾಡಿದೆ. ಹೀಗಾಗಿ ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ ಎಂದರು.

ಒಂದು ರಾಜ್ಯದ ಚುನಾವಣಾ ಫಲಿತಾಂಶ ಮತ್ತೊಂದು ರಾಜ್ಯದ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ ಅದರಂತೆ ಗುಜರಾತ್​ನ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ. ಒಂದು ವೇಳೆ ಹಾಗಿರುತ್ತಿದ್ದರೆ ಬಿಜೆಪಿಯು ದೆಹಲಿ ಕಾರ್ಪೊರೇಷನ್ ಚುನಾವಣೆಯಲ್ಲಿ ಯಾಕೆ ಗೆಲ್ಲಲಿಲ್ಲ? ಎಂದು ಪ್ರಶ್ನಸಿದರು. ಕರ್ನಾಟಕದಲ್ಲಿ ಭ್ರಷ್ಟ ಸರ್ಕಾರವಿದೆ. ಹೀಗಾಗಿ ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.