ಮನೆ ಮನರಂಜನೆ ‘ಫಾರ್‌ ರಿಜಿಸ್ಟ್ರೇಷನ್‌’ಸಿನಿಮಾದ ಚಿತ್ರೀಕರಣ ಮುಕ್ತಾಯ

‘ಫಾರ್‌ ರಿಜಿಸ್ಟ್ರೇಷನ್‌’ಸಿನಿಮಾದ ಚಿತ್ರೀಕರಣ ಮುಕ್ತಾಯ

0

ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ ‘ಫಾರ್‌ ರಿಜಿಸ್ಟ್ರೇಷನ್‌’ ಚಿತ್ರೀಕರಣ ಇತ್ತೀಚೆಗಷ್ಟೇ ಮುಗಿದಿದೆ.

ಕೊನೆಯ ದೃಶ್ಯವೊಂದನ್ನು ಈಜುಕೊಳದಲ್ಲಿ ಚಿತ್ರೀಕರಿಸಲಾಗಿದೆ. ನೀರಿನ ಒಳಗೆ ಕ್ಯಾಮೆರಾ ಇಟ್ಟು ಚಿತ್ರೀಕರಿಸಿದ್ದೇವೆ ಎಂದಿದ್ದಾರೆ ನಿರ್ದೇಶಕ ನವೀನ್‌ ದ್ವಾರಕಾನಾಥ್‌.

ಛಾಯಾಗ್ರಾಹಕ ಅಭಿಷೇಕ್ ಕಾಸರಗೋಡು ಈ ಹಾಡನ್ನು ಚಿತ್ರೀಕರಿಸಿದ್ದಾರೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶಿಸಿದ್ದಾರೆ. ಈ ಹಾಡಿನಲ್ಲಿ ನಾಯಕ– ನಾಯಕಿ ಅಭಿನಯಿಸಿದ್ದಾರೆ‌.

ಚಿತ್ರದ ಫಸ್ಟ್‌ ಲುಕ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಚಿತ್ರ ಫೆ. 10ರಂದು ಚಿತ್ರ ತೆರೆ ಕಾಣಲಿದೆ. ನಿಶ್ಚಲ್ ಫಿಲಂಸ್ ಮೂಲಕ ಎನ್.ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನವೀನ್ ದ್ವಾರಕಾನಾಥ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಹರೀಶ್ ಸಂಗೀತ ನಿರ್ದೇಶನ, ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.

ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ತಾರಾಬಳಗದಲ್ಲಿದ್ದಾರೆ.