Saval TV on YouTube
ಭಾರತದ ಜೀವ ವಿಮಾ ನಿಗಮ ಮತ್ತು ಭಾರತ ಸರ್ಕಾರದ ಮಾಲೀಕತ್ವದ ಅಡಿಯಲ್ಲಿ ಬರುವ ಅಭಿವೃದ್ಧಿ ಹಣಕಾಸು ಸಂಸ್ಥೆಯಾದ ಐಡಿಬಿಐ ಬ್ಯಾಂಕ್ ಲಿಮಿಟೆಡ್’ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಂದು ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಎಂಎ, ಎಂಕಾಂ, ಎಂಬಿಎ/ಪಿಜಿಡಿಎಂ ಪೂರ್ಣಗೊಳಿಸಿರಬೇಕು.
ಉದ್ಯೋಗದ ಸ್ಥಳ:
ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮುಂಬೈನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ನಿಯಮಾನುಸಾರ ವೇತನ ಕೊಡಲಾಗುತ್ತದೆ.














