ಮನೆ ಕಾನೂನು ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌’ಮುಖ್‌’ಗೆ ಜಾಮೀನು ನೀಡಿ, ತಕ್ಷಣ ತಡೆ ಹಿಡಿದ ಬಾಂಬೆ...

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌’ಮುಖ್‌’ಗೆ ಜಾಮೀನು ನೀಡಿ, ತಕ್ಷಣ ತಡೆ ಹಿಡಿದ ಬಾಂಬೆ ಹೈಕೋರ್ಟ್‌

0

ಮುಂಬೈ(Mumbai): ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌’ಮುಖ್‌ ಅವರಿಗೆ ಬಾಂಬೆ ಹೈಕೋರ್ಟ್‌ ಸೋಮವಾರ ಜಾಮೀನು ಮಂಜೂರು ಮಾಡಿ, ತಕ್ಷಣವೇ ತನ್ನ ಆದೇಶವನ್ನು 10 ದಿನಗಳವರೆಗೆ ತಡೆ ಹಿಡಿದಿದೆ.

ಎನ್‌’ಸಿಪಿ ನಾಯಕರೂ ಆಗಿರುವ 74 ವರ್ಷದ ದೇಶ್‌ಮುಖ್‌ ಅವರು ವೈದ್ಯಕೀಯ ಕಾರಣಗಳನ್ನು ಪರಿಗಣಿಸಿ ತಮಗೆ ಜಾಮೀನು ನೀಡುವಂತೆ ಕೋರಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕಳೆದ ತಿಂಗಳು ಮನವಿ ಮಾಡಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ್ದ ನ್ಯಾಯಾಲಯವು ದೇಶ್‌ಮುಖ್‌ ಮನವಿಯನ್ನು ತಳ್ಳಿಹಾಕಿತ್ತು. ಇದನ್ನು ಪ್ರಶ್ನಿಸಿ, ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಎಂ.ಎಸ್‌.ಕಾರಣಿಕ್‌ ಅವರಿದ್ದ ಏಕ ಸದಸ್ಯ ಪೀಠವು ಕಳೆದ ವಾರ ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ ಆದೇಶ ಕಾಯ್ದಿರಿಸಿತ್ತು.ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ.) ಕಳೆದ (2021ರ) ನವೆಂಬರ್‌’ನಲ್ಲಿ ಬಂಧಿಸಿದಾಗಿನಿಂದಲೂ ಅವರು ಜೈಲಿನಲ್ಲಿದ್ದಾರೆ.

ಈ ವರ್ಷ ಏಪ್ರಿಲ್‌’ನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ.ದೇಶಮುಖ್‌ ಅವರಿಗೆ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಕಳೆದ ತಿಂಗಳು ಜಾಮೀನು ಲಭಿಸಿದೆ.

ಮುಂಬೈನ ರೆಸ್ಟೋರೆಂಟ್‌ ಹಾಗೂ ಬಾರ್‌’ಗಳಿಂದ ಮಾಸಿಕ ₹ 100 ಕೋಟಿ ಸಂಗ್ರಹ ಮಾಡಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ದೇಶಮುಖ್‌ ಸೂಚನೆ ನೀಡಿದ್ದರು ಎಂದು ಐಪಿಎಸ್‌ ಅಧಿಕಾರಿ ಪರಮ್‌’ಬೀರ್‌ ಸಿಂಗ್ 2021ರ ಮಾರ್ಚ್‌ನಲ್ಲಿ ಆರೋಪಿಸಿದ್ದರು.

ಈ ಬಗ್ಗೆ ತನಿಖೆ ನಡೆಸುವಂತೆ 2021ರ ಏಪ್ರಿಲ್‌’ನಲ್ಲಿ ಸಿಬಿಐಗೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು.