ಮನೆ ಉದ್ಯೋಗ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 60,544 ಮೇಲ್ ಗಾರ್ಡ್, ಪೋಸ್ಟ್ ಮ್ಯಾನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ನೌಕರಿ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು.

ಉದ್ಯೋಗದ ಸ್ಥಳ:

ಮೇಲ್ ಗಾರ್ಡ್, ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:

ಮೇಲ್ ಗಾರ್ಡ್, ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 21,700-69,100 ವೇತನ ಕೊಡಲಾಗುತ್ತದೆ.