Saval TV on YouTube
ನವದೆಹಲಿ(Newdelhi): ಭಾರತ-ಚೀನಾ ಗಡಿಯಲ್ಲಿ ಡಿ.09 ರಂದು ನಡೆದ ಘರ್ಷಣೆಯ ವಿಷಯವಾಗಿ ಚರ್ಚೆ ನಡೆಸಲು ವಿಪಕ್ಷಗಳು ಸಂಸತ್ ಕಲಾಪದಲ್ಲಿ ಆಗ್ರಹಿಸಿದ ಕುರಿತು ಕೋಲಾಹಲ ಉಂಟಾಗಿ ಚರ್ಚೆಯ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ವಿಪಕ್ಷಗಳು ಕಲಾಪದಿಂದ ಹೊರನಡೆದಿವೆ.
ರಾಜ್ಯಸಭೆಯ ವಿಪಕ್ಷ ನಾಯಕ ಹಾಗು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷಗಳು ಭಾರತದ ನೆಲದಲ್ಲಿ ಚೀನಾ ಆಕ್ರಮಣಶೀಲತೆ ಮತ್ತು ಅತಿಕ್ರಮಣದ ವಿಷಯವಾಗಿ ಸಂಸತ್ ನಲ್ಲಿ ಚರ್ಚೆ ನಡೆಸಲು ಒತ್ತಾಯಿಸಿದ್ದವು, ಆದರೆ ಉಪಸಭಾಪತಿ ಹರಿವಂಶ್ ಅವರು ಚರ್ಚೆಗೆ ಸಂಬಂಧಿಸಿದಂತೆ ತಮಗೆ ಯಾವುದೇ ನೊಟೀಸ್ ಬಂದಿಲ್ಲ, ಆದ್ದರಿಂದ ಚರ್ಚೆಗೆ ಅವಕಾಶವಿಲ್ಲ ಎಂದು ಹೇಳಿದ್ದನ್ನು ಉಲ್ಲೇಖಿಸಿದ್ದಾರೆ.
ಚರ್ಚೆಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ, ಎನ್ ಸಿಪಿ, ಆರ್ ಜೆಡಿ, ಎಸ್ ಪಿ, ಜೆಎಂಎಂ, ಶಿವಸೇನೆ ಸೇರಿದಂತೆ ವಿಪಕ್ಷಗಳ ಸಂಸದರು ಸಭಾತ್ಯಾಗಕ್ಕೂ ಮುನ್ನ ಘೋಷಣೆ ಕೂಗಿದರು.