ಮನೆ ಕಾನೂನು ಜಿ.ಪಂ, ತಾ.ಪಂ. ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಜಿ.ಪಂ, ತಾ.ಪಂ. ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

0

ಬೆಂಗಳೂರು(Bengaluru): ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ಸರ್ಕಾರಕ್ಕೆ 5 ಲಕ್ಷ ರೂ.ದಂಡ ವಿಧಿಸಿದೆ.

ಪದೇ ಪದೇ ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ ಒಂದಿಂಚು ಮುಂದಕ್ಕೆ ಹೋಗಿಲ್ಲ.

ಸರ್ಕಾರದ ಈ ನಡೆ ನ್ಯಾಯಾಲಯದ ಆದೇಶಗಳನ್ನು ನಿಷ್ಕ್ರೀಯಗೊಳಿಸುವಂತಹದ್ದಾಗಿದೆ. ಜ.30ರಗೆ ತಾ.ಪಂ, ಜಿ.ಪಂ ಕ್ಷೇತ್ರ ನಿಗದಿ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಗಡುವು ನೀಡಿದೆ.