ಮನೆ ಮನರಂಜನೆ ‘ವೇದಾ’ ಚಿತ್ರದ ಟ್ರೈಲರ್ ಬಿಡುಗಡೆ

‘ವೇದಾ’ ಚಿತ್ರದ ಟ್ರೈಲರ್ ಬಿಡುಗಡೆ

0

ಬೆಂಗಳೂರು(Bengaluru): ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದಾ’ ಸಿನಿಮಾ ಇದೇ ಡಿಸೆಂಬರ್ 23 ಕ್ಕೆ ತೆರೆಗೆ ಬರಲಿದ್ದು, ಈ ಹಿನ್ನೆಲೆಯಲ್ಲಿ ಯೂಟ್ಯೂಬ್‌’ನಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಟ್ರೇಲರ್ ಚಿತ್ರದ ಬಗ್ಗೆ ಕುತೂಹಲವನ್ನು ಹುಟ್ಟಿಸಿದ್ದು, ಹಾಗೆಯೇ ಇದು ಶಿವರಾಜ್‌ಕುಮಾರ್-ಹರ್ಷ ಜೋಡಿಯ 4ನೇ ಚಿತ್ರ ಎಂಬುದು ವಿಶೇಷ.

ವೇದಾ ಚಿತ್ರವನ್ನು ಝೀ-ಸ್ಟುಡಿಯೋಸ್ ಜೊತೆಗೂಡಿ ಗೀತಾ ಸ್ಟುಡಿಯೋಸ್ ಮೂಲಕ ಗೀತಾ ಶಿವರಾಜ್ ಕುಮಾರ್ ನಿರ್ಮಿಸಿದ್ದು ಚಿತ್ರಕ್ಕೆ ಭಜರಂಗಿ ಎ.ಹರ್ಷ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇನ್ನು ವೇದಾ ಚಿತ್ರವು 1960ರ ದಶಕದಲ್ಲಿ ನಡೆಯುವ ಕ್ರೂರ ಕಥಾ ಹಂದರ ಹೊಂದಿದೆ.

ಚಿತ್ರದಲ್ಲಿ ಶಿವಣ್ಣನ ಮಗಳಾಗಿ ಅರುಣ್ ಸಾಗರ್ ಅವರ ಪುತ್ರಿ ಅದಿತಿ ಸಾಗರ್ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿಯಾಗಿ ‘ಮಗಳು ಜಾನಕಿ ನಟಿ’ ಗಾನವಿ ಇದ್ದು, ಇನ್ನುಳಿದಂತೆ ಕುರಿ ಪ್ರತಾಪ್, ಜಗ್ಗಪ್ಪ, ಉಮ್ರಾಶ್ರೀ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಇನ್ನು ವೇದಾ ಬಹುಭಾಷಾ ಸಿನಿಮಾವಾಗಿ ಮೂಡಿ ಬರುತ್ತಿದ್ದು, ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂನಲ್ಲಿ ತೆರೆ ಕಾಣಲಿದೆ.