ಮನೆ ಅಪರಾಧ ಖಾಸಗಿ ಬಸ್ ಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ

ಖಾಸಗಿ ಬಸ್ ಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ

0

ಬಂಟ್ವಾಳ(Bantwala): ಖಾಸಗಿ ಬಸ್ ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿರೋಡಿನ ನೇತ್ರಾವತಿ ಸೇತುವೆ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.

ಬಿ.ಸಿರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್’ನ  ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.

ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ.

ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್ ‘ಗೆ ಢಿಕ್ಕಿಯಾಗಿದ್ದು, ಯಾವುದೇ ಅಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಲಭ್ಯವಾಗಿಲ್ಲ.

ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು. ಕ್ರೇನ್ ಮೂಲಕ ಬಸ್ ಗಳನ್ನು ಸ್ಥಳದಿಂದ ಬದಿಗೆ ಸರಿಸಿದ ಬಳಿಕ ಸಂಚಾರಕ್ಕೆ ಅನುಕೂಲ  ಮಾಡಿಕೊಡಲಾಗಿದೆ.