Saval TV on YouTube
ಮಂಡ್ಯ(Mandya): ಕಬ್ಬು ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಮಂಡ್ಯ ಬಂದ್’ಗೆ ಕರೆ ನೀಡಿವೆ.
ಕಳೆದ 40 ದಿನಗಳಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಹಲವಾರು ರಾಜಕೀಯ ನಾಯಕರು ಭೇಟಿ ನೀಡಿ ಬೇಡಿಕೆ ಈಡೇರಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದರೂ, ಪ್ರತಿಭಟನೆ ಕೈ ಬಿಟ್ಟಿರಲಿಲ್ಲ. ಆದರೆ ಸರ್ಕಾರದ ಕಡೆಯಿಂದ ಸರಿಯಾದ ಸ್ಪಂದನೆ ಸಿಗದ ಕಾರಣ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಇಂದು ಮಂಡ್ಯ ಬಂದ್’ಗೆ ಕರೆ ನೀಡಿವೆ.
ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದ ಮಂಡ್ಯ ನಗರ ಬಂದ್’ಗೆ ವರ್ತಕರು, ಲಾರಿ, ಆಟೋ ಚಾಲಕರು, ಸಿಐಟಿಯು ಸೇರಿದಂತೆ ಕನ್ನಡ ಪರ ಸಂಘಟನೆಗಳು ಸಾಥ್ ನೀಡಿವೆ. ಬಂದ್’ಗೆ ಸಹಕರಿಸುವಂತೆ ಈಗಾಗಲೇ ಅಂಗಡಿ ಮುಂಗಟ್ಟು ಮಾಲೀಕರಿಗೆ ಮನವಿ ಮಾಡಿಕೊಂಡಿದ್ದಾರೆ.