ಮನೆ ರಾಷ್ಟ್ರೀಯ ಉತ್ತರಕಾಶಿಯಲ್ಲಿ 3.1 ತೀವ್ರತೆಯ ಭೂಕಂಪನ

ಉತ್ತರಕಾಶಿಯಲ್ಲಿ 3.1 ತೀವ್ರತೆಯ ಭೂಕಂಪನ

0

ಉತ್ತರಕಾಶಿ(ಉತ್ತರಾಖಂಡ): ಉತ್ತರಕಾಶಿಯಲ್ಲಿ ಮಧ್ಯರಾತ್ರಿ 1.50ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ. ಕೂಡಲೇ ಜನರು ಭಯದಲ್ಲಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರದ ಪ್ರಕಾರ 3.1 ತೀವ್ರತೆಯ ಭೂಕಂಪನ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು ಸುಮಾರು 5 ಕಿ.ಮೀ ಆಳದಲ್ಲಿದ್ದ ಕಾರಣ ಯಾವುದೇ ಸಾವು ನೋವು ಅಥವಾ ಆಸ್ತಿ ಪಾಸ್ತಿ ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ತಿಳಿಸಿದೆ.

ಈ ಹಿಂದೆ ನ. 12 ರಂದು ಕೂಡ ಉತ್ತರಾಖಂಡದಲ್ಲಿ ಭೂಕಂಪನದ ಅನುಭವವಾಗಿತ್ತು. ಆಗ ಭೂಕಂಪನದ ತೀವ್ರತೆ ಹೆಚ್ಚಾಗಿದ್ದು, ರಿಕ್ಟರ್​ ಮಾಪಕದಲ್ಲಿ 6.3 ತೀವ್ರತೆ ತೋರಿಸಿತ್ತು.