ಮನೆ ರಾಜಕೀಯ ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ: ಸುವರ್ಣಸೌಧ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಧರಣಿ

ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ: ಸುವರ್ಣಸೌಧ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಧರಣಿ

0

ಬೆಳಗಾವಿ(Belagavi): ರಾಜ್ಯ ಸರ್ಕಾರ ಸುವರ್ಣಸೌಧದ ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅನಾವರಣ ಮಾಡಲಾಗಿದೆ.

ಸಾವರ್ಕರ್ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ ಕೂಡ ಇದೇ ವೇಳೆ ಅನಾವರಣ ಮಾಡಲಾಗಿದೆ.

ಸಾವರ್ಕರ್ ಫೋಟೋ ಹಾಕಿದ್ದನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಸುವರ್ಣಸೌಧದ ವಿಐಪಿ ಗೇಟ್’ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಯು.ಟಿ ಖಾದರ್, ಹಿರಿಯ ಕಾಂಗ್ರೆಸ್ ನಾಯಕ ಎಚ್ ಕೆ ಪಾಟೀಲ್, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ ಸೇರಿದಂತೆ ಮತ್ತಿತರ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಕುವೆಂಪು, ಶಿಶುನಾಳ ಶರೀಫ, ಬಾಬು ಜಗಜೀವನ್ ರಾವ್, ಮಹಶ್ರೀ ವಾಲ್ಮೀಕಿ ಮತ್ತಿತರ ಫೋಟೋಗಳ ಪೋಸ್ಟರ್ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಾವರ್ಕರ್ ಫೋಟೋಗೆ ನಮ್ಮ ಆಕ್ಷೇಪ ಇಲ್ಲ

ಸಾವರ್ಕರ್ ಫೋಟೋಗೆ ನಮ್ಮ ಆಕ್ಷೇಪ ಇಲ್ಲ! ಆದರೆ ಇತರ ಅವರ ಫೋಟೋದ ಜೊತೆ ಇತರ ಮಹನೀಯರ ಫೋಟೋಗಳನ್ನು ಸಭಾಂಗಣದಲ್ಲಿ ಅಳವಡಿಕೆ ಮಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಸುವರ್ಣ ಸೌಧದಲ್ಲಿ ಸೋಮವಾರ ಮಾತಾನಾಡಿದ ಅವರು, ಇದು ಪ್ರತಿಭಟನೆ ಅಲ್ಲ, ಇದು ನಮ್ಮ ಬೇಡಿಕೆಯಾಗಿದೆ. ಅಸೆಂಬ್ಲಿ ಹಾಲ್’ನಲ್ಲಿ ಬಸವಣ್ಣ, ನಾರಾಯಣಗುರು, ವಾಲ್ಮೀಕಿ, ಕನಕದಾಸ ಫೋಟೋವನ್ನು ಹಾಕಿ ಎಂದರು.

ಅಸೆಂಬ್ಲಿ ಹಾಲ್’ನಲ್ಲಿ ಫೋಟೋ ಇಡಲು ಅಸೆಂಬ್ಲಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಸ್ಪೀಕರ್. ಆಡಳಿತ ಹಾಗೂ ವಿರೋಧ ಪಕ್ಷವಾಗಿದೆ ಆದರೆ ಅದು ಮಾಡಿಲ್ಲ. ಬಿಎಸಿಯಲ್ಲೂ ಚರ್ಚೆ ಆಗಿಲ್ಲ. ಏಕಾಏಕಿ ಭಾವಾಚಿತ್ರ ಅಳವಡಿಕೆ ಮಾಡಿದ್ದಾರೆ. ಭಾವಚಿತ್ರ ಅನಾವರಣ ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಇರಲಿಲ್ಲ, ಮಾಧ್ಯಮದ ಮೂಲಕ ತಿಳಿದುಕೊಂಡೆ. ಯಾರದೇ ಫೋಟೋ ಇಡಲು ವಿರೋಧ ಇಲ್ಲ. ಆದರೆ ಚರ್ಚೆ ಆಗದೆ ಇಟ್ಟಿರುವುದಕ್ಕೆ ನಮ್ಮ ವಿರೋಧ. ನಾವು ಅನೇಕ ವಿಷಯಗಳನ್ನು ಅಸೆಂಬ್ಲಿಯಲ್ಲಿ ಪ್ರಸ್ತಾಪ ಮಾಡುತ್ತೇವೆ, ಕಾನೂನು ಸುವ್ಯವಸ್ಥೆ, ಭ್ರಷ್ಟಾಚಾರ ಇದನ್ನು ಡೈವರ್ಟ್ ಮಾಡಲು ಈ ರೀತಿ ಫೋಟೋ ವಿವಾದ ಮುನ್ನಲೆಗೆ ತಂದಿದ್ದಾರೆ ಎಂದು ಆರೋಪಿಸಿದರು.