ಮನೆ ರಾಜಕೀಯ ವಿಧಾನಸಭಾ ಚುನಾವಣೆ: ಜೆಡಿಎಸ್’ನ ಮೊದಲ ಪಟ್ಟಿ ಬಿಡುಗಡೆ

ವಿಧಾನಸಭಾ ಚುನಾವಣೆ: ಜೆಡಿಎಸ್’ನ ಮೊದಲ ಪಟ್ಟಿ ಬಿಡುಗಡೆ

0

ಬೆಂಗಳೂರು(Bengaluru):  ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯನ್ನು ಬಿಡುಗಡೆಮಾಡಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದರು.

ಪಟ್ಟಿಯಲ್ಲಿ ಮೈಸೂರಿನಲ್ಲಿ ಹುಣಸೂರು ಕ್ಷೇತ್ರದಲ್ಲಿ ಹರೀಶ್ ಗೌಡ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹಾಲಿ ಶಾಸಕ ಜಿ.ಟಿ ದೇವೇಗೌಡ, ಕೆಆರ್ ನಗರ ಕ್ಷೇತ್ರಕ್ಕೆ ಹಾಲಿ ಶಾಸಕ ಸಾ.ರಾ ಮಹೇಶ್, ಪಿರಿಯಾಪಟ್ಟಣದಲ್ಲಿ  ಕೆ.ಮಹದೇವ್, ಟಿ. ನರಸೀಪುರಕ್ಕೆ ಹಾಲಿ ಶಾಸಕ ಅಶ್ವಿನ್ ಕುಮಾರ್, ವರುಣಾ ಕ್ಷೇತ್ರಕ್ಕೆ ಅಭಿಷೇಕ್, ಕೆಆರ್ ಕ್ಷೇತ್ರಕ್ಕೆ ಮಲ್ಲೇಶ್, ಮಂಡ್ಯ ಜಿಲ್ಲೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರಕ್ಕೆ ಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಕೆ.ಆರ್ ಪೇಟೆಗೆ ಹೆಚ್.ಟಿ ಮಂಜುನಾಥ್ ಅವರನ್ನು ಅಭ್ಯರ್ಥಿಯನ್ನಾಗಿ  ಘೋಷಿಸಲಾಗಿದೆ.