ಮನೆ ಸುದ್ದಿ ಜಾಲ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ

ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ

0

ಮೈಸೂರು(Mysuru): ಹೆಚ್.ಡಿ. ಕೋಟೆ ತಾಲ್ಲೂಕಿನ ಎನ್.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎನ್.ಬೇಗೂರು  ಸ.ಹಿ.ಪ್ರಾ.ಶಾಲೆ ಆವರಣದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.

ನರೇಗಾ ಯೋಜನೆಯಡಿ ಕೈಗೊಂಡಿರುವ ಸಮತಟ್ಟು ಮತ್ತು ಉದ್ಯಾನವನ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ  ಸೋಮವಾರ ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಹಮ್ಮಿಕೊಂಡು, ಅಧಿಕ ರಕ್ತದೊತ್ತಡ, ಸಕ್ಕರೆ ಖಾಯಿಲೆ, ರಕ್ತದಲ್ಲಿ ಹೀಮೋಗ್ಲೊಬಿನ್ ಪ್ರಮಾಣ, ತೂಕ ಪರೀಕ್ಷೆ ಮಾಡಲಾಯಿತು. 35 ಪುರುಷರು, 17 ಮಹಿಳೆಯರು ಸೇರಿ ಒಟ್ಟು 52 ಮಂದಿ ಆರೋಗ್ಯ ತಪಾಸಣೆ ನಡೆಸಿ, 11 ಮಂದಿ ಕೂಲಿಕಾರರನ್ನು ಹೆಚ್ಚಿನ ಚಿಕಿತ್ಸೆಗೆ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವಂತೆ ತಿಳಿಸಲಾಯಿತು.

ನಂತರ ತಾಲ್ಲೂಕು ಮಾಹಿತಿ ಶಿಕ್ಷಣ ಸಂವಹನ ಸಂಯೋಜಕ ನಿಂಗರಾಜು ಮಾತನಾಡಿ, ನರೇಗಾ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ಹಿತದೃಷ್ಟಿಯಿಂದ ಸರ್ಕಾರ ಉಚಿತ ಅರೋಗ್ಯ ತಪಾಸಣೆ ಕೈಗೊಕೊಂಡಿರುವುದು ಉತ್ತಮ ಕಾರ್ಯವಾಗಿದೆ.  ಕಾಮಗಾರಿ ಸ್ಥಳಕ್ಕೆ ಹೋಗಿ ತಪಾಸಣೆ ಮಾಡುತ್ತಿರುವುದು ಕೂಲಿಕಾರರ ತಪಾಸಣೆಗೆ ನೆರವಾಗಿದೆ  ಎಂದರು.

ಉದ್ಯೋಗ ಚೀಟಿ ಹೊಂದಿರುವ ಎಲ್ಲಾ ಅಕುಶಲ ಕೂಲಿ ಕಾರ್ಮಿಕರು ಕೇಂದ್ರ ಸರ್ಕಾರದ ಈ-ಶ್ರಮ್ ಪೋರ್ಟಲ್ ನಲ್ಲಿ ನೊಂದಾಯಿಸಿಕೊಂಡು, ಕಾರ್ಡ್ ಪಡೆದುಕೊಳ್ಳಿ, ಹಾಗೆಯೇ ತಾವು ಬ್ಯಾಂಕ್ ಖಾತೆ ಹೊಂದಿರುವ ಬ್ಯಾಂಕ್ ಗಳಲ್ಲಿ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯ ವಿಮೆ ಮಾಡಿಸಿಕೊಂಡು ಸರ್ಕಾರದಿಂದ ದೊರೆಯುವ 2 ಲಕ್ಷ ವರೆಗಿನ ವಿಮಾ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಸುಶೀಲ, ಉಪಾಧ್ಯಕ್ಷ ಅಭಿಲಾಷ್, ಸದಸ್ಯರು, ಗ್ರಾ.ಪಂ ಆರೋಗ್ಯ ಅಮೃತ ಅಭಿಯಾನ ಸಂಯೋಜಕರಾದ ರಾಘವೇಂದ್ರ, ಬಿ.ಸಿ.ಚಿಕ್ಕಮಾದು, ಸಮುದಾಯ ಆರೋಗ್ಯ ಅಧಿಕಾರಿ ಶಿವಕುಮಾರಿ ಹಾಗೂ ಗ್ರಾ.ಪಂ.ಸಿಬ್ಬಂದಿಗಳಾದ ಡಿಇಓ, ಪ್ರಕಾಶ್, ಬಿಲ್ ಕಲೆಕ್ಟರ್ ಮಣಿ ಸೇರಿದಂತೆ ಇತರು ಇದ್ದರು.