ಮನೆ ಸುದ್ದಿ ಜಾಲ ಮೈಸೂರು ಅರಮನೆ: ಧ್ವನಿ ಮತ್ತು ಬೆಳಕು ಕಾರ್ಯಕ್ರಮ ತಾತ್ಕಾಲಿಕ ರದ್ದು

ಮೈಸೂರು ಅರಮನೆ: ಧ್ವನಿ ಮತ್ತು ಬೆಳಕು ಕಾರ್ಯಕ್ರಮ ತಾತ್ಕಾಲಿಕ ರದ್ದು

0


ಮೈಸೂರು(Mysuru): ಡಿ.20 ರಿಂದ 2023 ರ ಜನವರಿ 08 ರವರೆಗೆ ಮೈಸೂರು ಅರಮನೆ ಆವರಣದಲ್ಲಿ ಸಂಜೆ 07 ರಿಂದ 08 ಗಂಟೆಯವರೆಗೆ ನಡೆಸಲ್ಪಡುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಮೈಸೂರು ಅರಮನೆ ಮಂಡಳಿ ವತಿಯಿಂದ ವಿಶ್ವವಿಖ್ಯಾತ ಅರಮನೆಯಲ್ಲಿ 2022ರ ಡಿಸೆಂಬರ್ ಮಾಹೆಯಲ್ಲಿ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಸದರಿ ಫಲಪುಷ್ಪ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಕಾರ್ಯಕ್ರಮಗಳು ಪ್ರಗತಿಯಲ್ಲಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.