ಮನೆ ರಾಜಕೀಯ ರಾಮನಗರದಲ್ಲಿ ಎಚ್’ಡಿಕೆ ವಂಶಪಾರಂಪರ್ಯ ರಾಜಕಾರಣಕ್ಕೆ ಅಂತ್ಯ: ಸಿ.ಪಿ. ಯೋಗೇಶ್ವರ್

ರಾಮನಗರದಲ್ಲಿ ಎಚ್’ಡಿಕೆ ವಂಶಪಾರಂಪರ್ಯ ರಾಜಕಾರಣಕ್ಕೆ ಅಂತ್ಯ: ಸಿ.ಪಿ. ಯೋಗೇಶ್ವರ್

0

ರಾಮನಗರ(Ramanagar): ಜಿಲ್ಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ವಂಶಪಾರಂಪರ್ಯ ರಾಜಕಾರಣಕ್ಕೆ  ಮುಂದಿನ ಚುನಾವಣೆಯಲ್ಲಿ ಜನತೆ ಅಂತ್ಯ ಹಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು.

ರಾಮನಗರ ವಿಧಾನಸಭೆ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಎಂದು ಮಾಜಿ ಸಿಎಂ  ಎಚ್.ಡಿ ಕುಮಾರಸ್ವಾಮಿ ಘೋಷಿಸಿರುವ ಬೆನ್ನಲ್ಲೆ ಸುದ್ದಿಗೋಷ್ಠಿ ನಡೆಸಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್  ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

ಕ್ಷೇತ್ರದಲ್ಲಿ 1,500 ಕೋಟಿ ರೂ. ಅನುದಾನ ತಂದಿರುವುದಾಗಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದು, ಈ ಎಲ್ಲ ಕಾಮಗಾರಿಯನ್ನು ಬೇನಾಮಿ ಹೆಸರಿನಲ್ಲಿ ತಾವೇ ನಡೆಸಿದ್ದಾರೆ. ಗುತ್ತಿಗೆದಾರರಿಂದ ದಂಧೆ ನಡೆಸಿ, ಆ ಪಾಪದ ಹಣವನ್ನು ಹೆಲಿಕಾಪ್ಟರ್ ನಲ್ಲಿ ಹೂವಿನ ರೂಪದಲ್ಲಿ ಚೆಲ್ಲಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಕುಮಾರಸ್ವಾಮಿ ಬಗ್ಗೆ ಬಿ.ಎಲ್. ಸಂತೋಷ್ ಹೇಳಿಕೆ ಸರಿಯಾಗಿಯೇ ಇದೆ. ಸಂತೋಷ್ ಜೀ ಅವರ ಬಗ್ಗೆ ವೈಯಕ್ತಿಕ ಟೀಕೆ ಸರಿಯಲ್ಲ. ಅವರು ನಮ್ಮ ನಾಯಕರು ಎಂದರು.

ಸ್ತ್ರೀಶಕ್ತಿ  ಸಂಘಗಳ ಸಾಲ ಮನ್ನಾ ವಿಚಾರದಲ್ಲಿ ಜೆಡಿಎಸ್ ಜನರ ದಿಕ್ಕು ತಪ್ಪಿಸುತ್ತಿದೆ. ಕಳೆದ ಬಾರಿಯೂ ಇವರ ಮಾತು ನಂಬಿಕೊಂಡು ಜನರ ಆಸ್ತಿ ಹರಾಜಾಯಿತು ಎಂದು ಟೀಕಿಸಿದರು.