ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 2 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ರಾಜ್ಯ ಸರ್ಕಾರದ ನೌಕರಿ ಹುಡುಕುತ್ತಿರುವವರು ಈಗಲೇ ಅರ್ಜಿ ಹಾಕಿ. ಅಟಲ್ ಜೀ ಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ 1 ಸಾಫ್ಟ್’ವೇರ್ ಡೆವಲಪರ್ ಮತ್ತು 1 ಆ್ಯಂಡ್ರ್ಯಾಯ್ಡ್ ಅಪ್ಲಿಕೇಶನ್ ಡೆಪಲಪರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಿದೆ. ಡಿಸೆಂಬರ್ 23, 2022, ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಎಷ್ಟೆಷ್ಟು ಹುದ್ದೆಗಳಿವೆ?
ಸಾಫ್ಟ್’ವೇರ್ ಡೆವಲಪರ್-1 ಹುದ್ದೆ
ಆಂಡ್ರ್ಯಾಯ್ಡ್ ಅಪ್ಲಿಕೇಶನ್ ಡೆಪಲಪರ್-1 ಹುದ್ದೆ
ವಿದ್ಯಾರ್ಹತೆ ಏನಿರಬೇಕು?
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್/ECE/IT/ಇನ್ಫರ್ಮೇಶನ್ ಸೈನ್ಸ್ ವಿಭಾಗದಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು. ಅಥವಾ MCA ಉತ್ತೀರ್ಣರಾಗಿರಬೇಕು.
ಅನುಭವ ಎಷ್ಟು ವರ್ಷ?
ಸಾಫ್ಟ್’ವೇರ್ ಡೆವಲಪರ್ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು NET ಡೆವಲಪ್ಮೆಂಟ್’ನಲ್ಲಿ ಕನಿಷ್ಠ 3-5 ವರ್ಷ ಕೆಲಸ ಮಾಡಿದ ಅನುಭವ, MS SQL ನಲ್ಲಿ MVC ಆರ್ಕಿಟೆಕ್ಚರ್ (C# ಪೂರ್ಣ ಸ್ಟಾಕ್) ಡೆವಲಪ್ಮೆಂಟ್ ಮತ್ತು ಡೆವಲಪ್ಮೆಂಟ್’ನಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು.
ಆ್ಯಂಡ್ರ್ಯಾಯ್ಡ್ ಅಪ್ಲಿಕೇಶನ್ ಡೆಪಲಪರ್ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಆ್ಯಂಡ್ರಾಯ್ಡ್ ಅಪ್ಲಿಕೇಶನ್ ಡೆವಲಪ್ಮೆಂಟ್’ನಲ್ಲಿ ಕನಿಷ್ಠ 3ರಿಂದ 5 ವರ್ಷ ಕೆಲಸ ಮಾಡಿದ ಅನುಭವ, ಜೊತೆಗೆ ಜಾವಾ ಲಾಂಗ್ವೇಜ್, Retrofit API ಇಂಟಿಗ್ರೇಷನ್, Sqlite ಡೇಟಾಬೇಸ್’ನಲ್ಲಿ ಕೆಲಸ ಮಾಡಿದ ಅನುಭವ ಹಾಗೂ UI/UX ನಲ್ಲಿ ಉತ್ತಮ ಜ್ಞಾನ ಹೊಂದಿರಬೇಕು.
ವೇತನ
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಸಾಫ್ಟ್’ವೇರ್ ಡೆವಲಪರ್ ಹಾಗೂ ಆಂಡ್ರ್ಯಾಯ್ಡ್ ಅಪ್ಲಿಕೇಶನ್ ಡೆಪಲಪರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 40,000-80,000 ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ 23/12/2022ರೊಳಗೆ ಇ-ಮೇಲ್ ಐಡಿ ajskcareers@gmail.com ಗೆ ಕಳುಹಿಸಬೇಕು.
ಡಿಸೆಂಬರ್ 14ರಂದು ಹುದ್ದೆಯ ಕುರಿತಾಗಿ ನೋಟಿಫಿಕೇಶನ್ ಬಿಡುಗಡೆಯಾಗಿದೆ. ಅರ್ಜಿ ಹಾಕಲು ಡಿಸೆಂಬರ್ 23, 2022 ಅಂದರೆ ನಾಳೆಯೇ ಕೊನೆಯ ದಿನವಾಗಿದೆ.