ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಕರ್ನಾಟಕ ಮೈಸೂರಿನ ಅಂಬಾವಿಲಾಸ ಆವರಣದಲ್ಲಿ 12ಲಕ್ಷಕ್ಕೂ ಹೆಚ್ಚು ಹೂಗಳಿಂದ ಅಲಂಕೃತಗೊಂಡ ಕಾಶಿ ವಿಶ್ವನಾಥ ದೇವಾಲಯ, ಸ್ವದೇಶೀ ನಿರ್ಮಿತ ಒಂದೇ ಮಾತರಂ ರೈಲು ಗಾಡಿ, ಅಮರ್ ಜವಾನ್ ಸ್ಮಾರಕ, ಹೂವಿನಿಂದ ಅಲಂಕೃತಗೊಂಡ ಆನೆ ಸೇರಿದಂತೆ ಕಲಾಕೃತಿಗಳ ವೀಕ್ಷಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಉದ್ಘಾಟಿಸಿದರು.
ನಂತರ ಮಾತನಾಡಿ ಸಚಿವರು ಫಲಪುಷ್ಪ ಪದರ್ಶನ ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಸುವುದೇ ನಮ್ಮ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಕೊರೋನ ಬಗ್ಗೆ ಯಾವುದೇ ಆತಂಕ ಪಡುವ ಪ್ರಮೇಯವಿಲ್ಲ, ವರ್ಷದ ಅಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಆರೋಗ್ಯ ಇಲಾಖೆ ನೀಡುವ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಲಾಗುವುದು ಎಂದರು.
ರಾಜ್ಯದ ರೈತರಿಗೆ ನೇರವಾಗಲೆಂದು ಸಹಕಾರ ಇಲಾಖೆಯ ಮುಖಾಂತರ ಶೂನ್ಯ ಬಡ್ಡಿ ದರದಲ್ಲಿ 24ಸಾವಿರ ಕೋಟಿ ನೂತನ ಸಾಲ ನೀಡಲಾಗುವುದು, ಈ ಯೋಜನೆ ಮೂಲಕ 33ಲಕ್ಷ ರೈತರು ಸಾಲ ನೀಡಲಾಗುವುದು, ಈಗಾಗಲೇ ರಾಜ್ಯದ ಡಿಸಿಸಿ ಬ್ಯಾಂಕ್ ಗಳ ಮೂಲಕ ನೂತನ ಸಾಲ ನೀಡಲಾಗುತ್ತಿದೆ, ಈ ಹಿಂದಿನ ಸಾಲ ಪಡೆದ ರೈತರು ಸಹ ಸಾಲ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಶಾಸಕರಾದ ಎಸ್ ಎ ರಾಮದಾಸ್, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಭಾಗಿಯಾಗಿದ್ದರು.