ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ವಿವಿಧ ಹುದ್ದೆಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸಹಾಯಕ ಕಾರ್ಮಿಕ ಆಯುಕ್ತರು ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 12ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಖಾಲಿ ಇರುವ ಹುದ್ದೆಗಳ ವಿವರ
ಒಟ್ಟು 10ಹುದ್ದೆಗಳು ಖಾಲಿ ಇದ್ದು, ಸೈಂಟಿಸ್ಟ್ ಬಿ 2 ಹುದ್ದೆ, ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ 4 ಹುದ್ದೆ, ಜಂಟಿ ಸಹಾಯಕ ನಿರ್ದೇಶಕರು 3 ಹುದ್ದೆ, ಸಹಾಯಕ ಕಾರ್ಮಿಕ ಆಯುಕ್ತರ ಒಂದು ಹುದ್ದೆ ಖಾಲಿ ಇದೆ.
ವೇತನ
ಸರ್ಕಾರಿ ವೇತನ ನಿಯಮಾನುಸಾರ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ– 13-01-2023
ಅಧಿಕೃತ ವೆಬ್ಸೈನ್
upsc.gov.in
ಮುಖ್ಯ ಮಾಹಿತಿ
ಅರ್ಜಿ ಶುಲ್ಕವನ್ನು ಪಾವತಿಸಲು ಜನವರಿ 13 ಕೊನೆಯ ದಿನವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಕೃತ ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ಆನ್’ಲೈನ್’ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಹತೆ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ವಿವಿಧ ಅರ್ಹತಾ ಮಾನದಂಡಗಳಿವೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಹತಾ ವಿವರಗಳನ್ನು ತಿಳಿಯಲು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು. ಇದಕ್ಕಾಗಿ ಅಭ್ಯರ್ಥಿಗಳು https://upsc.gov.in/ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಶುಲ್ಕ ಪಾವತಿ ಮಾಹಿತಿ
SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಇತರೆ ಅಭ್ಯರ್ಥಿಗಳು ಎಸ್ ಬಿಐನ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿಕೊಂಡು ಅಥವಾ ವೀಸಾ/ಮಾಸ್ಟರ್ ಕ್ರೆಡಿಟ್/ಡೆಬಿಟ್ ಕಾರ್ಡ್’ಗಳನ್ನು ಬಳಸಿಕೊಂಡು ಅರ್ಜಿ ಶುಲ್ಕವನ್ನು ಪಾವತಿಸಬಹುದು.