ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹಾಸನ(Hassan): ಕೊರಿಯರ್ ಶಾಪ್’ವೊಂದರಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ನಗರದ ಕೆ ಆರ್ ಪುರಂ ಬಡಾವಣೆಯಲ್ಲಿರುವ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ನಡೆದಿದೆ.
ಸೋಮವಾರ ರಾತ್ರಿ ಕೊರಿಯರ್’ನಲ್ಲಿ ಬಂದಿದ್ದ ಮಿಕ್ಸಿಯನ್ನು ತರೆಯುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕಚೇರಿ ಮಾಲೀಕ ಶಶಿ ಎಂಬುವರ ಬಲಗೈ ಐದು ಬೆರಳುಗಳು ಸಂಪೂರ್ಣ ತುಂಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಎಸ್’ಪಿ ಹರಿರಾಮ್ ಶಂಕರ್, ಗಾಯಾಳುವಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ. ಮಿಕ್ಸಿ ಬ್ಲೇಡ್ ತಾಗಿ ಅವರಿಗೆ ಪೆಟ್ಟಾಗಿದೆ. ಮೈಸೂರಿನಿಂದ ಎಫ್’ಎಸ್’ಎಲ್ ತಂಡ ಆಗಮಿಸಿ, ಪರಿಶೀಲನೆ ನಡೆಸಲಿದೆ. ಕೊರಿಯರ್ ಎಲ್ಲಿಂದ ಬಂತು ಅನ್ನೋ ಮಾಹಿತಿ ಇದೆ. ಯಾವುದೇ ಊಹಾಪೋಹ, ಗೊಂದಲ ಬೇಡ. ಪರಿಶೀಲನೆ ನಡೆಸುತ್ತಿದ್ದೇವೆ. ಎಫ್’ಎಸ್’ಎಲ್ ನೀಡುವ ವೈಜ್ಞಾನಿಕ ಸಾಕ್ಷ್ಯಾಧಾರದ ಆಧರಿಸಿ ತನಿಖೆ ಮುಂದುವರಿಸಲಾಗುತ್ತದೆ ಎಂದರು.
ಏನಿದು ಘಟನೆ ? :
ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್’ಗೆ ಬಂದಿದ್ದ ಪಾರ್ಸೆಲ್ ಅನ್ನು ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಿದ್ದರು. ಆದರೆ ಎರಡು ದಿನಗಳ ಬಳಿಕ ಮಿಕ್ಸಿ ಸೂಕ್ತ ವಿಳಾಸದಿಂದ ಬಂದಿಲ್ಲ ಎಂದು ಕೊರಿಯರ್’ಗೆ ವಾಪಸ್ ನೀಡಿದ ವ್ಯಕ್ತಿ, ವಾಪಸ್ ಪಡೆಯುವ ವೇಳೆ ಘಟನೆ ಸಂಭವಿಸಿದೆ.
ಬ್ಲಾಸ್ಟ್ ಹಿನ್ನೆಲೆಯಲ್ಲಿ ಕೊರಿಯರ್’ನ ಹಲವು ವಸ್ತುಗಳಿಗೆ ಹಾನಿಯಾಗಿದೆ. ಕೆ ಆರ್ ಪುರಂ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.