ಜಮ್ಮು: ಸಿಂಧ್ರಾ ಪ್ರದೇಶದಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಅನುಮಾನಾಸ್ಪದ ಟ್ರಕ್ ಚಲನೆಯನ್ನು ಪತ್ತೆ ಮಾಡಿದ ಪೊಲೀಸರು ಅದನ್ನು ತಡೆದಿದ್ದಾರೆ. ಈ ಸಂದರ್ಭ ಚಾಲಕ ಪರಾರಿಯಾಗಿದ್ದು, ಅದರಲ್ಲಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಯೂ ಪ್ರತಿ ದಾಳಿ ನಡೆಸಿದೆ. ಈ ಸಂದರ್ಭ ಮೂವರು ಉಗ್ರರು ಹತರಾಗಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಟ್ರಕ್’ಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಲಾಗಿದೆ.
ಈ ಪ್ರದೇಶದಲ್ಲಿ ಅನುಮಾನಾಸ್ಪದ ಟ್ರಕ್ ಚಲಿಸುತ್ತಿರುವುದು ಗಮನಕ್ಕೆ ಬಂದಿತ್ತು. ಚೆಕ್ ಪೋಸ್ಟ್’ನಲ್ಲಿ ಪೊಲೀಸರು ಅದನ್ನು ತಡೆದಿದ್ದಾರೆ. ವಾಹನ ತಪಾಸಣೆ ವೇಳೆ ಅದರಲ್ಲಿ ಅಡಗಿದ್ದ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಪ್ರತಿದಾಳಿ ನಡೆಸಿ ಎಲ್ಲ ಮೂವರೂ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಕೇಶ್ ಸಿಂಗ್ ಹೇಳಿದ್ದಾರೆ.
ಎನ್’ಕೌಂಟರ್ ಆರಂಭವಾಗುತ್ತಿದ್ದಂತೆ ಸಂಪೂರ್ಣ ಪ್ರದೇಶವನ್ನು ಬಂದ್ ಮಾಡಲಾಗಿದ್ದು, ಹೆದ್ದಾರಿ ಸಂಚಾರ ಸಹ ಸ್ಥಗಿತಗೊಳಿಸಲಾಗಿದೆ.