ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮಂಗಳೂರು(Mangalore): ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಲೈಂಗಿಕ ಅಪರಾಧ ಎಸಗಿದ ವ್ಯಕ್ತಿಗೆ (32) 15 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್’ಟಿಎಸ್’ಸಿ-II (ಪೋಕ್ಸೊ) ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ತೀರ್ಪು ನೀಡಿದ್ದಾರೆ.
ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.
ಘಟನೆ ವಿವರ: ಶಾಲೆಗೆ ಹೋಗಿದ್ದ ಸಂತ್ರಸ್ತ ವಿದ್ಯಾರ್ಥಿನಿ ಸ್ನೇಹಿತೆ ಜೊತೆ ಮನೆಗೆ ಮರಳುತ್ತಿದ್ದಾಗ 2021ರ ಆ.9ರಂದು ಆಕೆಯ ಮಾವ, ಅವರಿಬ್ಬರನ್ನು ಹಿಂಬಾಲಿಸಿದ್ದ. ದಾರಿಯಲ್ಲಿ ಸಂತ್ರಸ್ತೆಯ ಸ್ನೇಹಿತೆಯನ್ನು ನಿಂದಿಸಿ ಆಕೆಯನ್ನು ಕಳುಹಿಸಿದ್ದ. ನಂತರ ಆರೋಪಿ ಸಂತ್ರಸ್ತೆಯನ್ನು ತಡೆದು ಬಲವಂತವಾಗಿ ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಅಪರಾಧ ಎಸಗಿದ್ದ. ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ಯುವುದನ್ನು ಗಮನಿಸಿದ್ದ ಆಕೆಯ ಸ್ನೇಹಿತೆ, ಆಕೆಯ ಮನೆಯವರಿಗೆ ಮಾಹಿತಿ ನೀಡಿದ್ದಳು.
ಮಗಳ ಮೇಲೆ ಲೈಂಗಿಕ ಅಪರಾಧ ನಡೆದಿರುವುದು ಮನಗಂಡ ತಾಯಿ ದೂರು ದಾಖಲಿಸಿದ್ದರು. 2021ರ ಆ.15 ರಂದು ಅಪರಾಧಿಯನ್ನು ಬಂಧಿಸಲಾಗಿತ್ತು. ಇನ್’ಸ್ಪೆಕ್ಟರ್ ದಿನೇಶ್ ಕುಮಾರ್ ತನಿಖೆ ನಡೆಸಿದ್ದರು ಎಂದು ಸರ್ಕಾರದ ವಿಶೇಷ ವಕೀಲ ವೆಂಕಟರಮಣ ಸ್ವಾಮಿ ಮಾಹಿತಿ ನೀಡಿದ್ದಾರೆ.
ಕ್ರಿಮಿನಲ್ ಬೆದರಿಕೆಗಾಗಿ ನ್ಯಾಯಾಲಯವು ಆರೋಪಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ಒಂದು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಿದೆ.