ಮನೆ ಕ್ರೀಡೆ ಟಿ20: ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಹಾರ್ದಿಕ್‌ ಪಾಂಡ್ಯ ನಾಯಕತ್ವ

ಟಿ20: ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಹಾರ್ದಿಕ್‌ ಪಾಂಡ್ಯ ನಾಯಕತ್ವ

0

ನವದೆಹಲಿ: ಆಲ್‌’ರೌಂಡರ್ ಹಾರ್ದಿಕ್‌ ಪಾಂಡ್ಯ ಅವರು ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಕ್ರಿಕೆಟ್‌ ಸರಣಿಗೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಲಂಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್‌ ಶರ್ಮ ತಂಡವನ್ನು ಮುನ್ನಡೆಸಲಿದ್ದು, ಕೊಹ್ಲಿ ಮತ್ತು ರಾಹುಲ್‌ ಆಡಲಿದ್ದಾರೆ. ಬಿಸಿಸಿಐ ರಾಷ್ಟ್ರೀಯ ಆಯ್ಕೆ ಸಮಿತಿಯು 2024ರ ಟಿ20 ವಿಶ್ವಕಪ್‌ ಟೂರ್ನಿಗೆ ಈಗಿನಿಂದಲೇ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಯುವ ಆಟಗಾರರಿಗೆ ಮಣೆ ಹಾಕಿದೆ.

ಸೂರ್ಯಕುಮಾರ್‌ ಯಾದವ್‌ ಮತ್ತು ಹಾರ್ದಿಕ್‌ ಅವರು ಕ್ರಮವಾಗಿ ಟಿ20 ಮತ್ತು ಏಕದಿನ ತಂಡದಲ್ಲಿ ಉಪನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ವೇಗದ ಬೌಲರ್‌ಗಳಾದ ಶಿವಂ ಮವಿ ಮತ್ತು ಮುಖೇಶ್‌ ಕುಮಾರ್‌ ಅವರು ಇದೇ ಮೊದಲ ಬಾರಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಐಪಿಎಲ್‌ ಮಿನಿ ಹರಾಜಿನಲ್ಲಿ ಕ್ರಮವಾಗಿ ₹ 6 ಕೋಟಿ ಹಾಗೂ ₹ 5.50 ಕೋಟಿ ಬೆಲೆ ಪಡೆದುಕೊಂಡಿದ್ದರು.

ತಂಡ ವಿವರ:

ಟಿ20 ಸರಣಿ: ಹಾರ್ದಿಕ್‌ ಪಾಂಡ್ಯ (ನಾಯಕ), ಇಶಾನ್‌ ಕಿಶನ್‌ (ವಿಕೆಟ್‌ ಕೀಪರ್‌), ಋತುರಾಜ್‌ ಗಾಯಕವಾಡ್, ಶುಭಮನ್‌ ಗಿಲ್‌, ಸೂರ್ಯಕುಮಾರ್‌ ಯಾದವ್ (ಉಪನಾಯಕ), ದೀಪಕ್‌ ಹೂಡಾ, ರಾಹುಲ್‌ ತ್ರಿಪಾಠಿ, ಸಂಜು ಸ್ಯಾಮ್ಸನ್‌, ವಾಷಿಂಗ್ಟನ್‌ ಸುಂದರ್‌, ಯಜುವೇಂದ್ರ ಚಾಹಲ್, ಅಕ್ಷರ್‌ ಪಟೇಲ್, ಆರ್ಷದೀಪ್‌ ಸಿಂಗ್, ಹರ್ಷಲ್‌ ಪಟೇಲ್, ಉಮ್ರನ್‌ ಮಲಿಕ್, ಶಿವಂ ಮವಿ, ಮುಖೇಶ್‌ ಕುಮಾರ್

ಏಕದಿನ ಸರಣಿ: ರೋಹಿತ್‌ ಶರ್ಮ (ನಾಯಕ), ಶುಭಮನ್‌ ಗಿಲ್, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್, ಶ್ರೇಯಸ್‌ ಅಯ್ಯರ್, ಕೆ.ಎಲ್‌.ರಾಹುಲ್‌ (ವಿಕೆಟ್‌ ಕೀಪರ್‌), ಇಶಾನ್‌ ಕಿಶನ್ (ವಿಕೆಟ್‌ ಕೀಪರ್), ಹಾರ್ದಿಕ್‌ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲದೀಪ್‌ ಯಾದವ್, ಅಕ್ಷರ್‌ ಪಟೇಲ್, ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್, ಉಮ್ರನ್‌ ಮಲಿಕ್, ಆರ್ಷದೀಪ್‌ ಸಿಂಗ್