ಮನೆ ಸುದ್ದಿ ಜಾಲ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಭೇಟಿ: ಆರೋಗ್ಯ ವಿಚಾರಣೆ

ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಭೇಟಿ: ಆರೋಗ್ಯ ವಿಚಾರಣೆ

0

ಮೈಸೂರು(Mysuru): ಮೈಸೂರು ತಾಲೂಕು ಕಡಕೊಳ ಬಳಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಹ್ಲಾದ್ ಮೋದಿಯವರು ಹಾಗೂ ಕುಟುಂಬಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು  ವಿಶೇಷ ವಿಮಾನದ ಮೂಲಕ ಅಹಮದಾಬಾದ್‌’ಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಪಾಲಿಕೆ ಮಹಾಪೌರರಾದ ಶಿವಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಜೊತೆಯಲ್ಲಿದ್ದರು.