ಮನೆ ರಾಜ್ಯ ಹೊಸ ವರ್ಷಾಚರಣೆ: ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ

ಹೊಸ ವರ್ಷಾಚರಣೆ: ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ

0

ಬೆಂಗಳೂರು(Bengaluru): ಹೊಸ ವರ್ಷಾಚರಣೆ ಹಿನ್ನೆಲೆ ಬಿಎಂಆರ್’ಸಿಎಲ್ ನಮ್ಮ ಮೆಟ್ರೋದ ಸಂಚಾರ ಅವಧಿಯನ್ನು ವಿಸ್ತರಿಸಿದೆ. ಡಿಸೆಂಬರ್ 31ರಂದು ರಾತ್ರಿ 3 ಗಂಟೆ ಹಾಗೂ ಜನವರಿ 1ರ ಬೆಳಗಿನ ಜಾವ 2 ಗಂಟೆವರೆಗೂ ನಮ್ಮ ಮೆಟ್ರೋ ಸಂಚಾರ ಇರಲಿದೆ.

ಕೊನೆಯ ನಮ್ಮ ಮೆಟ್ರೋ ಸಂಚಾರ ರಾತ್ರಿ 2 ಗಂಟೆಗೆ ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನಾಲ್ಕು ದಿಕ್ಕಿಗೆ ಹೊರಡಲಿದೆ.

ಜನವರಿ 1 ರಂದು ಎಂದಿನಂತೆ 5.30 ಕ್ಕೆ ಮೆಟ್ರೋ ಸಂಚಾರ ಆರಂಭವಾಗಲಿದೆ, ಹೊಸ ವರ್ಷಾಚರಣೆ ಹಿನ್ನಲೆ ಎಂ.ಜಿ ರೋಡ್ ಬೈಯಪ್ಪನಹಳ್ಳಿ ಕಡೆಯಿಂದ ಸಂಚಾರ ಮಾಡುವ ಪ್ರಯಾಣಿಕರು ಮೆಟ್ರೋ ಬಳಕೆ ಮಾಡಲು ಬಿಎಂಆರ್’ಸಿಎಲ್ ಎಂ.ಡಿ ಅಂಜುಂ ಪರ್ವೇಜ್ ತಿಳಿಸಿದ್ದಾರೆ.