ಮನೆ ರಾಷ್ಟ್ರೀಯ ತಾಯಿ ಅಂತ್ಯಕ್ರಿಯೆ ಬಳಿಕ ಕರ್ತವ್ಯಕ್ಕೆ ಮರಳಿದ ಪ್ರಧಾನಿ ಮೋದಿ

ತಾಯಿ ಅಂತ್ಯಕ್ರಿಯೆ ಬಳಿಕ ಕರ್ತವ್ಯಕ್ಕೆ ಮರಳಿದ ಪ್ರಧಾನಿ ಮೋದಿ

0

ನವದೆಹಲಿ(Newdelhi): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ನಿಧನರಾದ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಕರ್ತವ್ಯಕ್ಕೆ ಮರಳಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಶ್ಚಿಮ ಬಂಗಾಳದಲ್ಲಿನ ಸುಮಾರು 7,800 ಕೋಟಿ ರೂಪಾಯಿಗಳ ಯೋಜನೆಗಳಿಗೆ ಚಾಲನೆ ನೀಡಿದರು.

ಬೆಳಿಗ್ಗೆಯೇ ಅವರು ಪಶ್ಚಿಮಬಂಗಾಳಕ್ಕೆ ತೆರಳಬೇಕಿತ್ತು, ಆದರೆ ತಾಯಿಯ ಮರಣದ ಹಿನ್ನೆಲೆಯಲ್ಲಿ ಅಹ್ಮದಾಬಾದ್’ಗೆ ಬರಬೇಕಾದ ಕಾರಣ ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಇಂದು ಮುಂಜಾನೆ ಗಾಂಧಿನಗರಕ್ಕೆ ಆಗಮಿಸಿದ ಪ್ರಧಾನಿ ಮೋದಿ, ತಮ್ಮ ಸಹೋದರರೊಂದಿಗೆ ತಾಯಿ ಹೀರಾಬೆನ್ ಮೋದಿ ಅವರ ಅಂತಿಮ ವಿಧಿ ವಿಧಾನ ನೆರವೇರಿಸಿದರು.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಮಾಜಿ ಸಿಎಂ ವಿಜಯ್ ರೂಪಾನಿ ಮತ್ತು ಗುಜರಾತ್ ಸಂಪುಟ ಸಚಿವರು ಹೀರಾಬಾ ಮೋದಿ ಅವರ ಅಂತ್ಯಕ್ರಿಯೆಯಲ್ಲಿ ಉಪಸ್ಥಿತರಿದ್ದರು.

ತಾಯಿಯ ಮರಣದ ದುಃಖದ ನಡುವೆಯೂ ಮೋದಿ ತಮ್ಮ ಕರ್ತವ್ಯಗಳನ್ನು ಎಂದಿನಂತೆ ಪಾಲಿಸುತ್ತಿದ್ದಾರೆ. ಮೋದಿಯವರ ಈ ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿದೆ.