ಬೆಂಗಳೂರು(Bengaluru): ಹೊಸ ವರ್ಷದ ಸಂಭ್ರಮಾಚರಣೆಗೆ ನಗರದಲ್ಲಿ ಡ್ರಗ್ಸ್ ಪೂರೈಕೆಗೆ ಯತ್ನಿಸುತ್ತಿದ್ದ 3 ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ 8 ಮಂದಿ ಪೆಡ್ಲರ್’ಗಳು ಸಿಸಿಬಿ ಬಲೆಗೆ ಬಿದ್ದಿದ್ದು, 6.31 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.
ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿರುವ ಕಮಿಷನರ್ ಪ್ರತಾಪ್ ರೆಡ್ಡಿ, ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ಮೇಲೆ ನಿಗಾ ವಹಿಸಲಾಗಿದೆ. ಗೋವಾ, ದೆಹಲಿ, ಆಂಧ್ರಪ್ರದೇಶ, ಹೈದರಾಬಾದ್‌ನಿಂದ ನಗರಕ್ಕೆ ಡ್ರಗ್ಸ್ ತಂದು ಸಂಗ್ರಹಿಸಿದ್ದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು. ಇಬ್ಬರು ವಿದೇಶಿಗರು ಹಾಗೂ ಆರು ಸ್ಥಳೀಯರನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಐವರಿಕೋಸ್ಟ್ ಮೂಲದ ಕಾವೊ ಎಸ್ಸೆ ಸಬಾಸ್ಟೀನ್, ಕೋಸ್ಟರಿಕಾದ ಆಗುºಚಿಕೆ ಅಂಥೋನಿ, ರಾಮಣ್ಣ, ಇರ್ಫಾನ್, ಬಾಷಾ, ಮೊಹಮ್ಮದ್ ಮುಜಾಯಿದ್, ಇಲಿಯಾಜ್ ಸೇರಿ 8 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 2 ಕೆ.ಜಿ. 550 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, 350 ಎಕ್ಸೈಸಿ ಮಾತ್ರೆಗಳು, 4 ಕೆ.ಜಿ. ತೂಕದ ಹ್ಯಾಶಿಸ್ ಆಯಿಲ್, 440 ಗ್ರಾಂ ತೂಕದ ಚರಸ್, 7 ಕೆಜಿ 100 ಗ್ರಾಂ ತೂಕದ ಗಾಂಜಾ ಸೇರಿದಂತೆ 6.31 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.
ಬಾಣಸವಾಡಿ, ಎಲೆಕ್ಟ್ರಾನಿಕ್ ಸಿಟಿ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.