ಮನೆ ರಾಷ್ಟ್ರೀಯ ಈರೋಡ್ ಖಾಸಗಿ ಆಸ್ಪತ್ರೆ ವೈದ್ಯ ಆತ್ಮಹತ್ಯೆ

ಈರೋಡ್ ಖಾಸಗಿ ಆಸ್ಪತ್ರೆ ವೈದ್ಯ ಆತ್ಮಹತ್ಯೆ

0

ಅಹಮದಾಬಾದ್​(Ahmadabad) : ಈರೋಡ್’​ನ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಾ. ಶಕ್ತಿವೇಲ್​ ಆತ್ಮಹತ್ಯೆಗೆ ಶರಣಾದ ವೈದ್ಯ.

ಶುಕ್ರವಾರ ಮನೆಯ ಒಳಗಿದ್ದ ಶಕ್ತಿವೇಲ್​ ಹೊರಗೆ ಬಂದಿರಲಿಲ್ಲ. ಈ ವೇಳೆ ಅನುಮಾನಗೊಂಡ ಅಕ್ಕಪಕ್ಕದವರು ಮನೆಯೊಳಗೆ ಹೋಗಿ ನೋಡಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ತಕ್ಷಣವೇ ಈರೋಡ್​ ಉತ್ತರ ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶಕ್ತಿವೇಲ್​ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ನಂತರ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಈರೋಡ್​ ಸರ್ಕಾರಿ ಜನರಲ್​ ಆಸ್ಪತ್ರೆಗೆ ಕಳುಹಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಶಕ್ತಿವೇಲ್​ ದಂಪತಿ ತಮ್ಮ ಹತ್ತು ವರ್ಷದ ಮಗನೊಂದಿಗೆ ಅಹಮದಾಬಾದ್ ಸಮೀಪ ನ್ಯೂ ಟೀಚರ್ಸ್​ ಕಾಲೋನಿಯಲ್ಲಿ ವಾಸಿಸುತ್ತಿದ್ದರು.