ಮನೆ ರಾಜಕೀಯ ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರಲಿದೆ: ಅಮಿತ್ ಶಾ

ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರಲಿದೆ: ಅಮಿತ್ ಶಾ

0

ಬೆಂಗಳೂರು(Bengaluru) : ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದರು.

ನಗರದಲ್ಲಿ ನಡೆದ ಬೂತ್ ಮಟ್ಟದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಕೆಲವರು ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಆದರೆ, ಅದು ಸುಳ್ಳು. ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಫರ್ಧಿಸುವುದರ ಜೊತೆ ಅಧಿಕಾರಕ್ಕೆ ಬಂದು ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌’ಗೆ ಅಧಿಕಾರ ಪಡೆಯುವುದು ಭ್ರಷ್ಟಾಚಾರದ ಒಂದು ಮಾರ್ಗವಾಗಿದೆ. ಆದರೆ, ನಮಗೆ ಅದು ಜನರ ಜೀವನವನ್ನು ಉತ್ತಮಗೊಳಿಸುವುದಕ್ಕಾಗಿದೆ. 7 ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 5 ರಾಜ್ಯಗಳಲ್ಲಿ ಗೆದ್ದಿದೆ. ಆದರೆ, 6 ರಾಜ್ಯಗಳಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ ಎಂದು ಶಾ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ಶುಕ್ರವಾರ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದ ಅಮಿತ್‌ ಶಾ ಅವರು, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿಯ ಎಟಿಎಂ ಆಗಲಿದೆ. ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಒಂದು ಕುಟುಂಬದ ಎಟಿಎಂ ಆಗಲಿದೆ. ಪದೇ ಪದೇ ಈ ಪಕ್ಷಗಳು ಭ್ರಷ್ಟಾಚಾರದಿಂದ ರಾಜ್ಯವನ್ನು ಹೊಲಸೆಬ್ಬಿಸಿವೆ. ರಾಜ್ಯವನ್ನು ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು, ಮಂಡ್ಯದಿಂದಲೇ ಬಿಜೆಪಿ ವಿಜಯಯಾತ್ರೆ ಆರಂಭವಾಗಲು‌, ಪ್ರಧಾನಿಯವರ ಕೈಗಳನ್ನು ಬಲಪಡಿಸಿ ಎಂದು ಕೋರಿದ್ದರು.