ಮನೆ ಸುದ್ದಿ ಜಾಲ ಮಗುಚಿ ಬಿದ್ದ ಶಾಲಾ ಪ್ರವಾಸದ ಬಸ್: ಹಲವರಿಗೆ ಗಂಭೀರ ಗಾಯ

ಮಗುಚಿ ಬಿದ್ದ ಶಾಲಾ ಪ್ರವಾಸದ ಬಸ್: ಹಲವರಿಗೆ ಗಂಭೀರ ಗಾಯ

0

ಕಾರ್ಕಳ: ತಿರುವಿನಲ್ಲಿ ಶಾಲಾ ಮಕ್ಕಳ ಪ್ರವಾಸದ ಬಸ್ ಮಗುಚಿ ಬಿದ್ದ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ಬಳಿ ನಡೆದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಖಾಸಗಿ ಬಸ್ ನಲ್ಲಿ ಮಕ್ಕಳು ಪ್ರವಾಸಕ್ಕೆಂದು ಕರಾವಳಿಗೆ ತೆರಳುತಿದ್ದರು. ಘಟನೆಯಲ್ಲಿ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ.

ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಕಾರ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.