ಮನೆ ಅಪರಾಧ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಹತ್ಯೆ: ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಹತ್ಯೆ: ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ

0

ಬೆಂಗಳೂರು(Bengaluru): ಯುವಕನೊಬ್ಬ ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಯಲಹಂಕ ತಾಲ್ಲೂಕು ರಾಜಾನುಕುಂಟೆ ಪ್ರೆಸಿಡನ್ಸಿ ಕಾಲೇಜಿನಲ್ಲಿ ನಡೆದಿದೆ.

ಯುವಕನೋರ್ವ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಳಿಕ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪ್ರೀತಿ ಪ್ರೇಮದ ವಿಚಾರಕ್ಕೆ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.