ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಜನವರಿ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 60,000 ಸಂಬಳ ಕೊಡಲಾಗುತ್ತದೆ.
ವಯೋಮಿತಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 31, 2022ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (ಎಚ್ಆರ್)
ಮಾನವ ಸಂಪನ್ಮೂಲ ಇಲಾಖೆ
2ನೇ ಬ್ಲಾಕ್
ಸರ್ಜಾಪುರ ರಸ್ತೆ
ಕೋರಮಂಗಲ
ಬೆಂಗಳೂರು-560034
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/01/2023
ಅರ್ಜಿ ಹಾಕಲು ಕೊನೆ ದಿನ: 12/01/2023