ಮನೆ ಅಪರಾಧ ವಿಧಾನಸೌಧದಲ್ಲಿ ಅನಧಿಕೃತವಾಗಿ 10.5 ಲಕ್ಷ ರೂ. ಹೊಂದಿದ್ದ ಸಹಾಯಕ ಇಂಜಿನಿಯರ್ ಪೊಲೀಸರ ವಶಕ್ಕೆ

ವಿಧಾನಸೌಧದಲ್ಲಿ ಅನಧಿಕೃತವಾಗಿ 10.5 ಲಕ್ಷ ರೂ. ಹೊಂದಿದ್ದ ಸಹಾಯಕ ಇಂಜಿನಿಯರ್ ಪೊಲೀಸರ ವಶಕ್ಕೆ

0

ಬೆಂಗಳೂರು(Bengaluru): ವಿಧಾನಸೌಧದಲ್ಲಿ ಅನಧಿಕೃತವಾಗಿ 10.5 ಲಕ್ಷ ರೂ. ಹಣ ಪತ್ತೆಯಾಗಿದ್ದು, ಹಣ ಹೊಂದಿದ್ದ ಸಹಾಯಕ ಇಂಜಿನಿಯರ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಡ್ಯ ಮೂಲದ ಸಹಾಯಕ ಇಂಜಿನಿಯರ್ ಜಗದೀಶ್ ಸಿಕ್ಕಿ ಬಿದ್ದ ಅಧಿಕಾರಿ.

ಬುಧವಾರ ಸಂಜೆ 7 ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಜಗದೀಶ್​​ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದರು.

ಗೇಟ್‌’ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಜಗದೀಶ್ ಬ್ಯಾಗ್‌’ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ. ಆದರೆ ಹಣದ ಮೂಲದ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಈ ವ್ಯಕ್ತಿ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಫ್‌’ಐಆರ್‌ ಕೂಡಾ ದಾಖಲಾಗಿದೆ.