ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಚಿತ್ರದುರ್ಗದ ಮುರುಘಾರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾದ ಎಫ್’ಐಆರ್ ರದ್ದುಪಡಿಸುವಂತೆ ಕೋರಿ ಮಠದ ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜನ್ ಮತ್ತವರ ಪತ್ನಿ ಸೌಭಾಗ್ಯ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ದೂರುದಾರ ಮರುಘಾ ರಾಜೇಂದ್ರ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಗ್ರಾಮೀಣಾ ಠಾಣಾ ಪೊಲೀಸರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಮಠದ ಆಡಳಿತಕ್ಕೆ ಒಳಪಟ್ಟಿರುವ ಪ್ರಿಯದರ್ಶಿನಿ ಶಾಲೆಯ ಶಿಕ್ಷಕ ಬಸವ ರಾಜೇಂದ್ರಪ್ಪ ಮತ್ತು ಪ್ರಕರಣದ ಸಂತ್ರಸ್ತೆಯ ತಾಯಿ ನಡುವೆ ನಡೆದ ಮೊಬೈಲ್ ಕರೆ ಸಂಭಾಷಣೆಯನ್ನು ಆಧರಿಸಿ ದೂರುದಾರರು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಡಾ. ಶಿವಮೂರ್ತಿ ಮರುಘಾ ಶರಣರ ವ್ಯಕ್ತಿತ್ವ ಮತ್ತು ಘನತೆಗೆ ಧಕ್ಕೆ ತಂದು ಮತ್ತು ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ದೂರು ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಲಾಗಿದೆ ಹಾಗೂ ಪಿತೂರಿ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಪ್ರಕರಣ ಸಂಬಂಧ ಪೊಲೀಸರು ದಾಖಲಿಸಿದ ಎಫ್ಐಆರ್’ನಲ್ಲಿ ತಮ್ಮ ಹೆಸರು ಉಲ್ಲೇಖವಾಗಿಲ್ಲ. ಆದರೂ ಪೊಲೀಸರು ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮನ್ನು ಬಂಧಿಸಿದ್ದಾರೆ. ತಮಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ತಮ್ಮನ್ನು ತಪ್ಪಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಪೊಲೀಸರ ನಡೆಯಿಂದ ಸಂವಿಧಾನದ 21ನೇ ವಿಧಿ ಅಡಿಯಲ್ಲಿ ತಮಗೆ ಪ್ರಾಪ್ತವಾಗಿರುವ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರದ ಹಕ್ಕು ಉಲ್ಲಂಘನೆಯಾಗಿದೆ. ಆದ್ದರಿಂದ ಎಫ್’ಐಆರ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಎಸ್ ಕೆ ಬಸವರಾಜನ್ ಅವರಿಗೆ ಈಚೆಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅರ್ಜಿದಾರರ ವಿರುದ್ಧ ಚಿತ್ರದುರ್ಗ ಗ್ರಾಮೀಣ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ಗಳಾದ 120ಬಿ, 384, 420 ಮತ್ತು 366ಎ ಅಡಿ ಪ್ರಕರಣ ದಾಖಲಿಸಲಾಗಿದೆ.