ಮನೆ ರಾಜ್ಯ ಡಾ.ಅನ್ನಪೂರ್ಣಮ್ಮ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಸರ್ಕಾರ ಪರಿಗಣಿಸಲಿ: ಬಸವ ಮಾಚಿದೇವ ಸ್ವಾಮೀಜಿ

ಡಾ.ಅನ್ನಪೂರ್ಣಮ್ಮ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಸರ್ಕಾರ ಪರಿಗಣಿಸಲಿ: ಬಸವ ಮಾಚಿದೇವ ಸ್ವಾಮೀಜಿ

0

ಚಿತ್ರದುರ್ಗ(Chitradurga): ಡಾ.ಅನ್ನಪೂರ್ಣಮ್ಮ ಅವರ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ಸರ್ಕಾರ ಈಗಲಾದರೂ ಪರಿಗಣಿಸಲಿ ಎಂದು ಎಂದು ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೋರಿದರು.

ಇಲ್ಲಿನ ಮಡಿವಾಳ ಗುರುಪೀಠದಲ್ಲಿ ಸ್ವಾಮೀಜಿ ಅವರ 5 ನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಕಾಯಕ ಜನೋತ್ಸವದಲ್ಲಿ ಅವರು ಮಾತನಾಡಿದರು.

ಮಡಿವಾಳ ಸಮುದಾಯ ಹಾಗೂ ಮಠಕ್ಕೆ ನೀಡಿದ ಎಲ್ಲ ಅನುದಾನವನ್ನು ಸರ್ಕಾರ ಹಿಂಪಡೆದು ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಿ. ಇದು ಸಮುದಾಯದ ವಿನಮ್ರ ಮನವಿಯೇ ವಿನಾ ಆಗ್ರಹವಲ್ಲ ಎಂದು ಹೇಳಿದ್ದಾರೆ.

ಮಠಕ್ಕೆ ₹ 3 ಕೋಟಿ ಅನುದಾನ ನೀಡಿರುವುದಕ್ಕೆ ಸರ್ಕಾರಕ್ಕೆ ಕೃತಜ್ಞರಾಗಿರುತ್ತೇವೆ. ಆದರೆ, ಸಮುದಾಯದ ಪ್ರಮುಖ ಬೇಡಿಕೆಯಾದ ಪರಿಶಿಷ್ಟ ಜಾತಿ ಮೀಸಲಾತಿ ಸೌಲಭ್ಯವನ್ನು ಈಡೇರಿಸಿದರೆ ಇನ್ನಷ್ಟು ಅನುಕೂಲವಾಗಲಿದೆ. ಎಂದರು.

ಮಡಿವಾಳ ಸಮುದಾಯದ ಶೇ 98ರಷ್ಟು ಜನರು ಇನ್ನೂ ಕುಲಕಸುಬು ನಂಬಿ ಬದುಕು ಸಾಗಿಸುತ್ತಿದ್ದಾರೆ. ಸಮುದಾಯದ ಅಭಿವೃದ್ಧಿ ನಿಗಮಕ್ಕೆ ಮುಂದಿನ ಬಜೆಟ್‌ನಲ್ಲಿ ಕನಿಷ್ಠ ₹ 500 ಕೋಟಿ ಅನುದಾನ ನೀಡಬೇಕು. ಸಹೋದರ ಸಮುದಾಯಕ್ಕೆ ನೀಡಿರುವ ಉಚಿತ ವಿದ್ಯುತ್ ಸೌಲಭ್ಯವನ್ನು ಮಡಿವಾಳ ಸಮುದಾಯಕ್ಕೂ ಕಲ್ಪಿಸಬೇಕು ಎಂದರು.

ಡಾ.ಅನ್ನಪೂರ್ಣಮ್ಮ ವರದಿಯನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ನ್ಯಾಯ ಕೊಡಿಸುವ ಕಾರ್ಯವನ್ನು ಮಾಡುತ್ತೇವೆ. ಸಂವಿಧಾನದ ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದರು.

ಕುಲಶಾಸ್ತ್ರೀಯ ಅಧ್ಯಯನದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿ ಎಂಟು ವರ್ಷ ಕಳೆದಿದೆ. ಈವರೆಗೆ ಅಧಿಕಾರ ನಡೆಸಿದ ಯಾವ ಸರ್ಕಾರವೂ ವರದಿಯ ಪುಟ ತಿರುಗಿಸಿ ನೋಡಿಲ್ಲ. ಸಮುದಾಯಕ್ಕೆ ಒಳ್ಳೆಯ ದಿನಗಳು ಬಂದಿವೆ. ಮತ್ತೊಬ್ಬರಿಗೆ ಅನ್ಯಾಯ ಆಗದ ರೀತಿಯಲ್ಲಿ ನ್ಯಾಯ ಒದಗಿಸುತ್ತೇವೆ ಎಂದರು.