ಮನೆ ಮನರಂಜನೆ ಮೈಸೂರಿನಲ್ಲಿ ಜ.26 ರಂದು ವಸಿಷ್ಠ ಸಿಂಹ – ಹರಿಪ್ರಿಯಾ ಮದುವೆ

ಮೈಸೂರಿನಲ್ಲಿ ಜ.26 ರಂದು ವಸಿಷ್ಠ ಸಿಂಹ – ಹರಿಪ್ರಿಯಾ ಮದುವೆ

0

ಸ್ಯಾಂಡಲ್ ವುಡ್’ನ ತಾರಾ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಿಶ್ಚಿತಾರ್ಥ ಮಾಡಿಕೊಂಡಿರುವುದು ಗೊತ್ತೇ ಇದೆ. ಈ ಜೋಡಿಯ ಮದುವೆ ಜನವರಿ 26 ರಂದು ಮೈಸೂರಿನಲ್ಲಿ ನಡೆಯಲಿದೆ.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ವಿವಾದ ಬಗ್ಗೆ ಬರೆದುಕೊಂಡಿದ್ದಾರೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ವಿವಾಹ ಕಾರ್ಯಕ್ರಮ ನಡೆಯಲಿದೆ. ಮೈಸೂರು- ಊಟಿ ಹೆದ್ದಾರಿಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆದರು. ಈ ವೇಳೆ ಸಂಸದ ಪ್ರತಾಪ್‌ ಸಿಂಹ ಹಾಜರಿದ್ದರು.

ಕಳೆದ ಡಿ.3 ಕ್ಕೆ ಈ ತಾರಾ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅದಕ್ಕೂ ಕೆಲವು ದಿನ ಮೊದಲು ಇವರಿಬ್ಬರು ಜೊತೆಗೆ ಓಡಾಡುತ್ತಿದ್ದ ಫೋಟೊಗಳು ವೈರಲ್ ಆಗಿದ್ದವು.