ಮನೆ ಸುದ್ದಿ ಜಾಲ ಮಂಡ್ಯ: ಉರುಳಿ ಬಿದ್ದ ಕೆಎಸ್’ಆರ್’ಟಿಸಿ ಬಸ್- 32 ಪ್ರಯಾಣಿಕರಿಗೆ ಗಾಯ

ಮಂಡ್ಯ: ಉರುಳಿ ಬಿದ್ದ ಕೆಎಸ್’ಆರ್’ಟಿಸಿ ಬಸ್- 32 ಪ್ರಯಾಣಿಕರಿಗೆ ಗಾಯ

0

ಮಂಡ್ಯ(Mandya): ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿಯ ಚನ್ನರಾಯಪಟ್ಟಣ- ಮೈಸೂರು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್​’ಆರ್​’ಟಿಸಿ ಬಸ್ ಉರುಳಿ ಬಿದ್ದು 32 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದ್ದು, ಬಸ್ ಪಲ್ಟಿಯಾಗಿ ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಕೆ ಆರ್ ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆ ಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.