ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru) : ಅತಿವೇಗದಲ್ಲಿ ಬಂದ ಕಾರೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಡರಾತ್ರಿ ಕೆ.ಆರ್.ಪುರಂನ ಆರ್.ಟಿ.ಒ ಕಚೇರಿ ಮುಂಭಾಗದಲ್ಲಿ ನಡೆದಿದೆ.
ಫಾಝಿಲಾ ಹಾಗೂ ತಸೀನಾ ಮೃತರು.
ಕೆ.ಆರ್ ಪುರಂ ಮಾರ್ಗವಾಗಿ ಸಾಗುತ್ತಿದ್ದ ಆಟೋದಲ್ಲಿ ಚಾಲಕ ಖಾಲೀದ್, ಆತನ ಪತ್ನಿ ತಾಸೀನಾ, ಫಾಝಿಲಾ ಹಾಗೂ ಇಬ್ಬರು ಮಕ್ಕಳು ತೆರಳುತ್ತಿದ್ದರು.
ರಾತ್ರಿ 9:20ರ ಸುಮಾರಿಗೆ ಅತೀ ವೇಗದಲ್ಲಿ ಬಂದ ಕಪ್ಪು ಬಣ್ಣದ ಇನ್ನೋವಾ ಕಾರೊಂದು ಏಕಾಏಕಿ ಆಟೋಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಎರಡು ವರ್ಷದ ಒಂದು ಮಗುವಿಗೆ ಗಂಭೀರ ಗಾಯಗಳಾಗಿವೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕ ಅಪಘಾತವೆಸಗಿ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿ ಸೈಫ್ ಎಂಬುವರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ನಾಪತ್ತೆಯಾಗಿರುವ ಕಾರು ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.