ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಶಿಕಾರಿಪುರ(Shikaripura): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಎರಡು-ಮೂರು ದಿನಗಳಲ್ಲಿ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಟ್ಟಣದಲ್ಲಿ ಶನಿವಾರ ಬಿಜೆಪಿ ಬೂತ್ ವಿಜಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರದಲ್ಲಿ ಗೆಲುವು ಸಾಧಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಾಗುವುದಿಲ್ಲ. ಕಾಂಗ್ರೆಸ್’ನ ಕೆಲವು ನಾಯಕರು ತಾವೇ ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೆ. ಅದು ಕೇವಲ ತಿರುಕನ ಕನಸು ಹೊರತು ಸಾಧ್ಯವಿಲ್ಲ ಎಂಬುದು ಅವರಿಗೂ ಮನವರಿಕೆಯಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಜಯಭೇರಿ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ತಾವು ನಿಂತಿರುವ ನೆಲ ಕುಸಿಯುತ್ತಿದೆ ಎಂಬುದರ ಬಗ್ಗೆ ಅರಿವಿಲ್ಲದೇ ಸಿದ್ದರಾಮಯ್ಯ, ಮುಖ್ಯಮಂತ್ರಿ ಹಾಗೂ ಬೇರೆಯವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರ ಹಗುರ ಮಾತುಗಳಿಗೆ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.