ಮನೆ ಕಾನೂನು ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ದೀಪಕ್ ಬಂಧನ ಕಾನೂನಿಗೆ ಅನುಗುಣವಾಗಿಲ್ಲ: ಬಾಂಬೆ ಹೈಕೋರ್ಟ್...

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ದೀಪಕ್ ಬಂಧನ ಕಾನೂನಿಗೆ ಅನುಗುಣವಾಗಿಲ್ಲ: ಬಾಂಬೆ ಹೈಕೋರ್ಟ್ ಜಾಮೀನು

0

ನವದೆಹಲಿ:  ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಸಿಐಸಿ ಬ್ಯಾಂಕ್’ನ  ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ  ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್  ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶ ನೀಡಿದೆ.

ಐಸಿಐಸಿಐ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ  ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಕಾನೂನಿನ ಪ್ರಕಾರವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದ ನಂತರ ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ವಂಚನೆ ಪ್ರಕರಣದಲ್ಲಿ  ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಇಬ್ಬರನ್ನೂ ಸಿಬಿಐ ಅಧಿಕಾರಿಗಳು 2022ರ ಡಿಸೆಂಬರ್ 23ರಂದು ಬಂಧಿಸಿದ್ದರು. ಬಳಿಕ ಅವರನ್ನು ಸಿಬಿಐ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಸೂಚಿಸಿತ್ತು. ಚಂದಾ ಕೊಚ್ಚರ್ ಮತ್ತು ದೀಪಕ್ ಕೊಚ್ಚರ್ ಅವರ ಬಂಧನ ಕಾನೂನು ಸಮ್ಮತವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಇದೀಗ ಅಭಿಪ್ರಾಯಪಟ್ಟಿದೆ.

ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್ನ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್’ಗೆ ಒದಗಿಸಿದ  3,000 ಕೋಟಿ ರೂ. ಹೆಚ್ಚು ಸಾಲದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 23 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರನ್ನು ಬಂಧಿಸಿತ್ತು.

ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ತನ್ನ ಬಂಧನ ಕಾನೂನುಬಾಹಿರವಾಗಿದೆ, ತನಿಖೆಯನ್ನು ಆರಂಭಿಸಲು ಕಾಯಿದೆಯ ಸೆಕ್ಷನ್ 17A ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ ಹಾಗೂ ಈ ತನಿಖೆಯನ್ನು ಪ್ರಾರಂಭಿಸಲು ಸಂಸ್ಥೆಯು ಅಂತಹ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಕೊಚ್ಚರ್ ದಂಪತಿ ನ್ಯಾಯಾಲಯದ ಮುಂದೆ ವಾದಿಸಿದರು.

ಪ್ರಕರಣದ ಹಿನ್ನೆಲೆ: 2012 ರಲ್ಲಿ ಐಸಿಐಸಿಐ ಬ್ಯಾಂಕ್ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್’ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್’ಗೆ ಕೋಟ್ಯಾಂತರ ರೂಪಾಯಿ ನಷ್ಟವಾಗಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್’ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್’ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.