ಮನೆ ರಾಜ್ಯ ಕಾಂಗ್ರೆಸ್ ಪಕ್ಷದ ಜ.16ರ ‘ನಾ ನಾಯಕಿ’ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಆಗಮನ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷದ ಜ.16ರ ‘ನಾ ನಾಯಕಿ’ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಆಗಮನ: ಡಿ.ಕೆ.ಶಿವಕುಮಾರ್

0

ಬೆಂಗಳೂರು(Bengaluru): ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 16ರಂದು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇತರ ಪಕ್ಷಗಳ ನಾಯಕರನ್ನು ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೋಮವಾರ ಸೇರ್ಪಡೆ ಮಾಡಿಕೊಂಡ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿ, ಸಹಕಾರ ಸಂಘಗಳಲ್ಲಿ ಸ್ಪರ್ಧಿಸಿದ ಮಹಿಳಾ ನಾಯಕಿಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಪ್ರತಿ ಬೂತ್, ಪಂಚಾಯಿತಿಗಳಿಂದ ಕನಿಷ್ಠ 3ರಿಂದ 10 ಹೆಣ್ಣು ಮಕ್ಕಳು ಭಾಗವಹಿಸಬೇಕು ಎಂದು ಅವರು ಆಹ್ವಾನ ನೀಡಿದರು.

ಹೆಣ್ಣು ಸಮಾಜದ ಶಕ್ತಿಯಾಗಿದ್ದು, ಅವರ ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದೇವೆ. ಈಗಾಗಲೇ ಸಾವಿರಾರು ಸಲಹೆಗಳು ಬಂದಿವೆ. ಅವುಗಳನ್ನು ಒಂದು ಸಮಿತಿ ಪರಿಶೀಲನೆ ನಡೆಸುತ್ತಿದೆ. ಮಹಿಳೆಯರಿಗೆ ಪಕ್ಷ ನೀಡುವ ಭರವಸೆಗಳನ್ನು ಸಮಾವೇಶದಲ್ಲಿ ಪ್ರಿಯಾಂಕಾ ಘೋಷಣೆ ಮಾಡಲಿದ್ದಾರೆ ಎಂದೂ ಅವರು ತಿಳಿಸಿದರು.