ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ದಾವಣಗೆರೆ(Davanagere): ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 37,000 ದಂಡ ವಿಧಿಸಿ ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.
ಹೊನ್ನಾಳಿ ತಾಲ್ಲೂಕಿನ ಹುಣಸಘಟ್ಟ ಗ್ರಾಮದ ಹಾಲೇಶ್ ಅಲಿಯಾಸ್ ಹಾಲಸ್ವಾಮಿ (25) ಶಿಕ್ಷೆಗೆ ಒಳಗಾದ ಅಪರಾಧಿ.
ಈತ 2019ರಲ್ಲಿ 17 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅಪಹರಿಸಿ ಪ್ರೀತಿಸುವುದಾಗಿ ಪುಸಲಾಯಿಸಿ, ಮದುವೆ ಆಗುವುದಾಗಿ ನಂಬಿಸಿ ತೀರ್ಥಹಳ್ಳಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ಉಡುಪಿ ಸಮೀಪದ ಸಾಲಿಗ್ರಾಮದ ತನ್ನ ಸ್ನೇಹಿತನ ಮನೆಗೆ ಕರೆದುಕೊಂಡು ಹೋಗಿದ್ದ ಅಪರಾಧಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ್ದ.
ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಬ್ರಿಜೇಷ್ ಮೆಹತಾ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಅತ್ಯಾಚಾರದ ಆರೋಪ ಸಾಬೀತಾಗಿದ್ದು, ಜಿಲ್ಲಾ ಮತ್ತು ಸೆಷನ್ಸ್ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ಶ್ರೀಪಾದ್ ಅವರು, ತೀರ್ಪು ಪ್ರಕಟಿಸಿದರು.
ಸಂತ್ರಸ್ತೆಗೆ ಪರಿಹಾರ ರೂಪದಲ್ಲಿ 4.50 ಲಕ್ಷ ಕೊಡಿಸುವಂತೆ ಜಿಲ್ಲಾ ಉಚಿತ ಸೇವಾ ಪ್ರಾಧಿಕಾರ ನೀಡುವಂತೆ ಆದೇಶಿಸಿದೆ. ಸರ್ಕಾರದ ಪರವಾಗಿ ಪೋಕ್ಸೋ ನ್ಯಾಯಾಲಯದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ರೇಖಾ ಎಸ್.ಕೋಟೆಗೌಡರ್ ವಾದ ಮಂಡಿಸಿದ್ದರು.