ಮನೆ ಅಪರಾಧ ನೇತ್ರಾವತಿ ನದಿಯಲ್ಲಿ ಬಜರಂಗದಳ ಕಾರ್ಯಕರ್ತನ ಶವ ಪತ್ತೆ

ನೇತ್ರಾವತಿ ನದಿಯಲ್ಲಿ ಬಜರಂಗದಳ ಕಾರ್ಯಕರ್ತನ ಶವ ಪತ್ತೆ

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯಲ್ಲಿ ಗುರುವಾರ ಬಜರಂಗ ದಳದ ಕಾರ್ಯಕರ್ತನ ಶವ ಪತ್ತೆಯಾಗಿದೆ.

ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ (36) ಎಂದು ಗುರುತಿಸಲಾಗಿದೆ.

ಪಾಣೆಮಂಗಳೂರಿನ ಹಳೆ ಸೇತುವೆಯ ಮೇಲೆ ಬಿಟ್ಟುಹೋಗಿದ್ದ ಬೈಕ್ ಅನ್ನು ಕಂಡು ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಹುಡುಕಾಟದ ಬಳಿಕ ಪೊಲೀಸರಿಗೆ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.