ಮನೆ ಅಪರಾಧ ನಾಸಿಕ್’ನಲ್ಲಿ ಟ್ರಕ್’ಗೆ ಬಸ್ ಡಿಕ್ಕಿ: 10 ಮಂದಿ ಸಾವು

ನಾಸಿಕ್’ನಲ್ಲಿ ಟ್ರಕ್’ಗೆ ಬಸ್ ಡಿಕ್ಕಿ: 10 ಮಂದಿ ಸಾವು

0

ನಾಸಿಕ್‌: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಸ್ಸೊಂದು ಅತಿ ವೇಗದಲ್ಲಿ ಟ್ರಕ್‌’ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಥಾಣೆ ಜಿಲ್ಲೆಯ ಅಂಬರನಾಥದಿಂದ ಹೊರಟಿದ್ದ ಖಾಸಗಿ ಐಷಾರಾಮಿ ಬಸ್ ಅಹಮದ್‌’ನಗರ ಜಿಲ್ಲೆಯ ಶಿರಡಿಗೆ ಹೋಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ನಾಸಿಕ್‌’ನ ಸಿನ್ನಾರ್ ತೆಹಸಿಲ್‌’ನ ಪಥರೆ ಶಿವಾರ್ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ ಏಳು ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಮತ್ತು ಒಬ್ಬ ಪುರುಷ ಸೇರಿದ್ದಾರೆ. ಗಾಯಾಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆ ಮತ್ತು ಸಿನ್ನಾರ್‌’ನಲ್ಲಿರುವ ಯಶವಂತ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.