ಮನೆ ರಾಜ್ಯ ಸ್ಯಾಂಟ್ರೊ ರವಿ ಬಂಧನ: ನಿಮಿಷಾಂಬ ದೇವಸ್ಥಾನದಲ್ಲಿ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್

ಸ್ಯಾಂಟ್ರೊ ರವಿ ಬಂಧನ: ನಿಮಿಷಾಂಬ ದೇವಸ್ಥಾನದಲ್ಲಿ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್

0

ಶ್ರೀರಂಗಪಟ್ಟಣ(Srirangapattana) : ಸ್ಯಾಂಟ್ರೋ ರವಿ ಬಂಧನದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಶ್ರೀರಂಗಪಟ್ಟಣದ ಗಂಜಾಂ ಗ್ರಾಮದಲ್ಲಿರುವ ಶಕ್ತಿ ದೇವತೆ ನಿಮಿಷಾಂಭ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.

ಕಳೆದ 4 ದಿನಗಳ ಹಿಂದೆ ಇದೇ ದೇವಸ್ಥಾನಕ್ಕೆ ಆಗಮಿಸಿ ಹರಕೆ ಹೊತ್ತುಕೊಂಡಿದ್ದ ಅಲೋಕ್ ಕುಮಾರ್ ಅವರು ನಿಮಿಷಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸ್ಯಾಂಟ್ರೋ ರವಿ ಬಂಧನವಾದರೆ ಮತ್ತೆ ದೇಗುಲಕ್ಕೆ ಆಗಮಿಸುವುದಾಗಿ ಹರಕೆ ಹೊತ್ತಿದ್ದರು. ಹರಕೆ ಹೊತ್ತುಕೊಂಡ 26 ಗಂಟೆಗಳಲ್ಲೆ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಲಾಗಿತ್ತು.

ಈ ಸಂದರ್ಭ ಮಾತನಾಡಿದ ಅವರು, ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಕೇಸ್ ಆಗಿತ್ತು. ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ.ಹಾಗೆ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದರೆ 5 ಗಂಟೆಗಳಲ್ಲಿ ಆರೋಪಿಗಳನ್ನು  ಬಂಧಿಸಲಾಗಿತ್ತು. ಈಗಲೂ ಹತ್ತನೇ ತಾರೀಕಿನಂದು ಬಂದು ನಾನು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ.ಈಗಲೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು.

ಆತ ಈಗ ನಮ್ಮ‌ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ. ಮೊದಲು ಆತನ ವಿರುದ್ದ ದಾಖಲಾಗಿರುವ ಕೇಸ್ ಬಗೆಗೆ ವಿಚಾರಣೆ ನಡೆಯುತ್ತೆ ನಂತರ ಆತ ತಲೆ ಮರೆಸಿಕೊಂಡು ಎಲ್ಲೆಲ್ಲಿ ಇದ್ದ ಆತನಿಗೆ ಯಾರೆಲ್ಲಾ ಸಹಾಯ ಮಾಡಿದರು ಎಂಬ ಬಗೆಗೆ ವಿಚಾರಣೆ ಮಾಡುತ್ತೇವೆ. ಹಾಗೊಂದು ವೇಳೆ ಯಾರಾದರೂ ಸಹಾಯ ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದರು.