ಮನೆ ರಾಜ್ಯ ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ

ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ

0

ಬೆಂಗಳೂರು(Bengaluru): ವಂಚಕ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

11 ದಿನಗಳ ಕಾಲ ತಲೆ ಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಕೊನೆಗೆ ಗುಜರಾತ್ ನಲ್ಲಿ ಸೆರೆಸಿಕ್ಕಿದ್ದ. ಸ್ಯಾಂಟ್ರೋ ರವಿ ಬಂಧನ ಬಳಿಕವೂ ಹಲವು ಅನುಮಾನಗಳನ್ನು ವಿರೋಧ ಪಕ್ಷಗಳು ವ್ಯಕ್ತಪಡಿಸಿವೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ನೀಡಿ ಆದೇಶಿಸಿದೆ.

ಸ್ಯಾಂಟ್ರೋ ರವಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವು ರಾಜಕಾರಣಿಗಳ ಜೊತೆ ಫೋಟೋದಲ್ಲಿ ಕಾಣಿಸಿಕೊಂಡಿದ್ದ. ವರ್ಗಾವಣೆ ವಿಚಾರವಾಗಿ ಡಿವೈಎಸ್’ಪಿ ಜೊತೆಗಿನ ಆಡಿಯೋ ಮಾತುಕತೆ ವೈರಲ್ ಆದ ಹಿನ್ನೆಲೆಯಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.

ಈ ಆಡಿಯೋ ಬೆನ್ನಲ್ಲೇ ಸ್ಯಾಂಟ್ರೋ ರವಿಯ ಹಲವು ಅಕ್ರಮಗಳು ಬೆಳಕಿಗೆ ಬಂದಿದ್ದವು. ಈತನ ಎರಡನೇ ಪತ್ನಿ ಸ್ಯಾಂಟ್ರೋ ರವಿ ವಿರುದ್ಧ ಮೈಸೂರು ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ಬೆಳವಣಿಗೆ ಬೆನ್ನಲ್ಲೇ ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಕೇರಳ, ಮಹಾರಾಷ್ಟ್ರ, ಪುಣೆಯಲ್ಲಿ ತಲೆಮರೆಸಿಕೊಂಡಿದ್ದ ಈತ ಕೊನೆಗೂ ಗುಜರಾತ್’ನಲ್ಲಿ ಬಂಧನವಾಗಿದ್ದ.

ಆರಗ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಎಚ್ ಡಿಕೆ, ಸ್ಯಾಂಟ್ರೋ ರವಿ ಬಂಧನದ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಗುಜರಾತ್ ನಲ್ಲಿ ಇದ್ದ ವಿಚಾರವಾಗಿ ಸಾಕಷ್ಟು ಚರ್ಚೆ ನಡೆದಿತ್ತು. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿಯಂಥ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂಥ ಪ್ರಸಂಗ ಬರುವಂತಾದರೆ, ಸಾವನ್ನು ಬಯಸುತ್ತೇನೆ ಎಂಬು ಭಾವುಕರಾಗಿ ಹೇಳಿದ್ದರು.