ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಖಾಲಿ ಇರುವ 19 ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಹಾಕಲು ಜನವರಿ 18, 2023 ಕೊನೆಯ ದಿನವಾಗಿದೆ. ಅಂದರೆ ನಾಳೆ ಸಂದರ್ಶನ ನಡೆಯಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವಿದ್ಯಾರ್ಹತೆ:
ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ (MBBS) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂದು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 60,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತುಮಕೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 14/01/2023
ಸಂದರ್ಶನ ನಡೆಯುವ ದಿನಾಂಕ: ಜನವರಿ 18, 2023
ಸಂದರ್ಶನ ನಡೆಯುವ ಸ್ಥಳ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ
ತುಮಕೂರು
ಕರ್ನಾಟಕ
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 9449843064 ಗೆ ಕರೆ ಮಾಡಬಹುದು.