ಮನೆ ಶಿಕ್ಷಣ ಎಸ್’ಎಸ್’ಎಲ್’ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಎಸ್’ಎಸ್’ಎಲ್’ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

0

ಬೆಂಗಳೂರು: 2022-23ನೇ ಸಾಲಿನ ಎಸ್‌’ಎಸ್‌’ಎಲ್‌’ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ.

ಈ ಹಿಂದೆ ಹೊರಡಿಸಲಾಗಿದ್ದ ವೇಳಾಪಟ್ಟಿಗೆ ಕೆಲವು ಬದಲಾವಣೆ ಮಾಡಿ, ಅಂತಿಮ ವೇಳಾಪಟ್ಟಿಯನ್ನು ಹೊರಡಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿ ಹೀಗಿದೆ:

ಮಾರ್ಚ್‌ 31ರಂದು ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ ಪರೀಕ್ಷೆ ನಡೆಯಲಿದೆ.

ಏಪ್ರಿಲ್‌ 3 ರಂದು ಗಣಿತ ಶಾಸ್ತ್ರ, ಸಮಾಜ ಶಾಸ್ತ್ರ.

ಏಪ್ರಿಲ್ 6 ರಂದು ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ.

ಏಪ್ರಿಲ್ 10 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.

ಏಪ್ರಿಲ್‌ 12 ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ.

ಏಪ್ರಿಲ್‌ 15 ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿಯಾಗಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಪ್ರತಿದಿನ ಒಂದು ವಿಷಯಕ್ಕೆ ಮಾತ್ರ ನಡೆಯಲಿದೆ. ಬೆಳಗ್ಗೆ 10-30 ರಿಂದ ಮಧ್ಯಾಹ್ನ 01-30 ರವರೆಗೆ ಪರೀಕ್ಷೆ ನಡೆಯುತ್ತದೆ.

ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ1.45ರವರೆಗೆ ಮತ್ತು ದ್ವಿತೀಯ, ತೃತೀಯ ಬಾಷೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಅವಧಿ ನೀಡಲಾಗಿದೆ.