ಮನೆ ಕಾನೂನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಿಸಿದ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಿಸಿದ ಎನ್’ಐಎ

0

ಮಂಗಳೂರು(Mangalore): ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಎ) ಘೋಷಿಸಿದೆ.

2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಅವರ ಕೋಳಿ ಅಂಗಡಿಯ ಮುಂದೆಯೇ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದರು.

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್’ಐ) ಸಂಘಟನೆಯ ಸದಸ್ಯರಾಗಿರುವ ಬಂಟ್ವಾಳ ತಾಲ್ಲೂಕಿನ ಕೊಡಾಜೆಯ ಮೊಹಮ್ಮದ್ ಶರೀಫ್ (53) ಮತ್ತು ನೆಕ್ಕಿಲಾಡಿಯ ಕೆಎ ಮಸೂದ್  (40) ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು. ಇವರಿಬ್ಬರ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಹೇಳಿದೆ.

ಇವರಿಬ್ಬರ ಮಾಹಿತಿ ನೀಡುವವರನ್ನು ಗೌಪ್ಯವಾಗಿಡಲಾಗುವುದು. ಈ ಬಗ್ಗೆ ಯಾವುದೇ ಮಾಹಿತಿ ಇದ್ದವರು ಬೆಂಗಳೂರಿನ ಎನ್ಐಎ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.