ಮನೆ ರಾಜಕೀಯ ಸಿಎಂ ಬೊಮ್ಮಾಯಿ ಭೇಟಿಯಾದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್

ಸಿಎಂ ಬೊಮ್ಮಾಯಿ ಭೇಟಿಯಾದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್

0

ಬೆಂಗಳೂರು(Bengaluru): ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಆರ್ ಟಿ ನಗರದ ನಿವಾಸದಲ್ಲಿ ಭೇಟಿ ಮಾಡಿರುವುದು ಸಾಕಷ್ಟು  ಕುತೂಹಲಕ್ಕೆ ಕಾರಣವಾಗಿದೆ.

ಸರ್ಕಾರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಹೆಚ್.ವಿಶ್ವನಾಥ್ ಇತ್ತೀಚೆಗೆ ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ. ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದರು.

ಕಾಂಗ್ರೆಸ್ ಪಕ್ಷ ಸೇರ್ಪಡೆ ಹೇಳಕೆ ಕೊಟ್ಟ ಬಳಿಕ ಹೆಚ್.ವಿಶ್ವನಾಥ್ ಅವರು ಸಿಎಂ  ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.